AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಭರ್ಜರಿ ಶತಕ ಬಾರಿಸಿದ ಕೆಎಲ್ ರಾಹುಲ್

KL Rahul Century: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೆಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ 245 ರನ್​ ಕಲೆಹಾಕಿದೆ. ಸೌತ್ ಆಫ್ರಿಕಾ ಪರ ಕಗಿಸೊ ರಬಾಡ 5 ವಿಕೆಟ್ ಪಡೆದರೆ, ನಾಂಡ್ರೆ ಬರ್ಗರ್ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Dec 27, 2023 | 3:14 PM

Share
ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

1 / 7
ಮೊದಲ ಇನಿಂಗ್ಸ್​ನ 5ನೇ ಓವರ್​ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್​ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.

2 / 7
ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 68 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಮತ್ತೆ ದಾಳಿಗಿಳಿದ ರಬಾಡ ಶ್ರೇಯಸ್ ಅಯ್ಯರ್ (31) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (38) ಕೂಡ ರಬಾಡಗೆ ವಿಕೆಟ್ ಒಪ್ಪಿಸಿದರು. ಪರಿಣಾಮ ಟೀಮ್ ಇಂಡಿಯಾ 107 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು.

3 / 7
ಈ ಹಂತದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಸೌತ್ ಆಫ್ರಿಕಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಕನ್ನಡಿಗ ರನ್​ಗಳಿಸುತ್ತಾ ಸಾಗಿದರು. ಅಲ್ಲದೆ ಮೊದಲ ದಿನದಾಟದಲ್ಲೇ ಅರ್ಧಶತಕ ಪೂರೈಸಿ ತಂಡಕ್ಕೆ ಆಸರೆಯಾಗಿ ನಿಂತರು.

4 / 7
ಅಲ್ಲದೆ ಮೊದಲ ದಿನದಾಟದಲ್ಲಿ ಅಜೇಯ 70 ರನ್​ ಬಾರಿಸಿ ಕೆಎಲ್ ರಾಹುಲ್ ತಂಡದ ಮೊತ್ತವನ್ನು 8 ವಿಕೆಟ್​ ನಷ್ಟಕ್ಕೆ 208 ಕ್ಕೆ ತಂದು ನಿಲ್ಲಿಸಿದರು. 2ನೇ ದಿನದಾಟದಲ್ಲಿ ಸಿರಾಜ್ ಜೊತೆ ಇನಿಂಗ್ಸ್ ಆರಂಭಿಸಿದ ರಾಹುಲ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

5 / 7
ಇತ್ತ 9ನೇ ವಿಕೆಟ್​ ಆಗಿ ಸಿರಾಜ್ ಹೊರ ನಡೆಯುತ್ತಿದ್ದರೆ ಅತ್ತ ರಾಹುಲ್​ಗೆ ಶತಕ ಪೂರೈಸಲು 5 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಪ್ರಸಿದ್ಧ್ ಕೃಷ್ಣ ಸಿಂಗಲ್ ರನ್ ತೆಗೆದುಕೊಂಡರು. ಈ ವೇಳೆ ಸ್ಟ್ರೈಕ್​ಗೆ ಬಂದ ಕೆಎಲ್ ರಾಹುಲ್ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 133 ಎಸೆತಗಳಲ್ಲಿ ಶತಕ ಪೂರೈಸಿದರು.

6 / 7
ಅಂತಿಮವಾಗಿ 137 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 101 ರನ್ ಬಾರಿಸಿ ಕೆಎಲ್ ರಾಹುಲ್ ಔಟಾದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ 245 ರನ್​ಗಳಿಸಿ ಆಲೌಟ್ ಆಗಿದೆ.

7 / 7

Published On - 2:31 pm, Wed, 27 December 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ