AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 3977 ದಿನಗಳು… ನಿಧಾನದೊಂದಿಗೆ ದಾಖಲೆ ಪಟ್ಟಿ ಸೇರಿದ ಕೆಎಲ್ ರಾಹುಲ್

India vs South Africa, 1st Test: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ದ್ವಿತೀಯ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ 159 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.

ಝಾಹಿರ್ ಯೂಸುಫ್
|

Updated on: Nov 15, 2025 | 10:24 AM

Share
ಕೆಎಲ್ ರಾಹುಲ್ (KL Rahul) ಟೆಸ್ಟ್ ಕೆರಿಯರ್ ಶುರು ಮಾಡಿ ಬರೋಬ್ಬರಿ 11 ವರ್ಷಗಳಾಗಿವೆ. ಈ ಹನ್ನೊಂದು ವರ್ಷಗಳಲ್ಲಿ ಕೆಎಲ್​ಆರ್ ಆಡಿರುವುದು ಕೇವಲ 66 ಪಂದ್ಯಗಳನ್ನು ಮಾತ್ರ. ಇದೀಗ ಆರವತ್ತಾರು ಮ್ಯಾಚ್​ಗಳ ಮೂಲಕ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 19 ರನ್​ಗಳಿಸುವುದರೊಂದಿಗೆ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್​ನಲ್ಲಿ 4000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 18ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ವಿಶೇಷ ಎಂದರೆ ಈ ಸಾಧನೆ ಮಾಡಲು ಕೆಎಲ್ ರಾಹುಲ್ ತೆಗೆದುಕೊಂಡಿರುವುದು ಬರೋಬ್ಬರಿ 3977 ದಿನಗಳು. ಅಂದರೆ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ 3977 ದಿನಗಳ ಬಳಿಕ 4 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ 4000 ರನ್​​ಗಳಿಸಲು ದೀರ್ಘಾವಧಿ ಸಮಯ ತೆಗೆದುಕೊಂಡ ಭಾರತದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮೊಹಿಂದರ್ ಅಮರನಾಥ್. ಟೀಮ್ ಇಂಡಿಯಾದ ಮಾಜಿ ಆಟಗಾರ ಟೆಸ್ಟ್ ಕ್ರಿಕೆಟ್​ನಲ್ಲಿ 4000 ರನ್ ಪೂರೈಸಲು ಬರೋಬ್ಬರಿ 6214 ದಿನಗಳನ್ನು ತೆಗೆದುಕೊಂಡಿದ್ದರು. ಇದೀಗ 3977 ದಿನಗಳ ಮೂಲಕ ಕೆಎಲ್ ರಾಹುಲ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಟೀಮ್ ಇಂಡಿಯಾ ಪರ ಈವರೆಗೆ 66 ಟೆಸ್ಟ್ ಪಂದ್ಯಗಳಲ್ಲಿ 115 ಇನಿಂಗ್ಸ್ ಆಡಿರುವ ಕೆಎಲ್ ರಾಹುಲ್ 7679* ಎಸೆತಗಳನ್ನು ಎದುರಿಸಿ ಈವರೆಗೆ 4011* ರನ್ ಕಲೆಹಾಕಿದ್ದಾರೆ. ಇದರ ನಡುವೆ 11 ಭರ್ಜರಿ ಶತಕ ಹಾಗೂ 20 ಅರ್ಧಶತಕಗಳನ್ನು ಸಹ ಬಾರಿಸಿರುವುದು ವಿಶೇಷ.

5 / 5