AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಬರೋಬ್ಬರಿ 46 ವರ್ಷಗಳ ಬಳಿಕ ಹೊಸ ಇತಿಹಾಸ ನಿರ್ಮಿಸಿದ ಕೆಎಲ್ ರಾಹುಲ್

India vs England: ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 358 ರನ್ ಕಲೆಹಾಕಿದರೆ, ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 669 ರನ್​ಗಳಿಸಿತು. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ 4ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 174 ರನ್​ಗಳಿಸಿದೆ.

ಝಾಹಿರ್ ಯೂಸುಫ್
|

Updated on:Jul 27, 2025 | 11:36 AM

Share
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 46 ರನ್ ಬಾರಿಸಿದ್ದ ಕೆಎಲ್​ಆರ್​ ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 87 ರನ್​ಗಳಿಸಿದ್ದಾರೆ. ಈ ಎಂಬತ್ತೇಳು ರನ್​ಗಳೊಂದಿಗೆ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 508* ರನ್ ಕಲೆಹಾಕಿದ್ದಾರೆ.

1 / 5
ಇದರೊಂದಿಗೆ ವಿದೇಶಿ ಟೆಸ್ಟ್ ಸರಣಿಯಲ್ಲಿ 500+ ರನ್​ ಕಲೆಹಾಕಿದ ಭಾರತದ 2ನೇ ಆರಂಭಿಕ ದಾಂಡಿಗ ಎಂಬ ಹೆಗ್ಗಳಿಕೆ ಕೆಎಲ್ ರಾಹುಲ್ ಪಾಲಾಗಿದೆ. ಈ ಮೂಲಕ ಕಳೆದ 4 ದಶಕಗಳಲ್ಲಿ ಟೀಮ್ ಇಂಡಿಯಾದ ಯಾವುದೇ ಓಪನರ್​ಗೆ ಸಾಧ್ಯವಾಗದೇ ಇರುವುದನ್ನು ಕನ್ನಡಿಗ ಮಾಡಿ ತೋರಿಸಿದ್ದಾರೆ.

2 / 5
ಅಂದರೆ ಭಾರತದ ಪರ ವಿದೇಶಿ ಟೆಸ್ಟ್ ಸರಣಿವೊಂದರಲ್ಲಿ 500+ ರನ್ ಕಲೆಹಾಕಿರುವುದು ಸುನಿಲ್ ಗವಾಸ್ಕರ್ ಮಾತ್ರ. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 774 ರನ್​ ಕಲೆಹಾಕಿ ಗವಾಸ್ಕರ್ ಐತಿಹಾಸಿಕ ಸಾಧನೆ ಮಾಡಿದ್ದರು. ಇನ್ನು 1979 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 542 ರನ್​ಗಳಿಸಿ ಮಿಂಚಿದ್ದರು. ಇದಾದ ಬಳಿಕ ಭಾರತದ ಯಾವುದೇ ಬ್ಯಾಟರ್ ವಿದೇಶಿ ಸರಣಿಯೊಂದರಲ್ಲಿ 500 ರನ್​ಗಳ ಮೈಲುಗಲ್ಲು ಮುಟ್ಟಿರಲಿಲ್ಲ.

3 / 5
ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೆಎಲ್ ರಾಹುಲ್ 508* ರನ್ ಕಲೆಹಾಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ 46 ವರ್ಷಗಳಿಂದ ಭಾರತದ ಯಾವುದೇ ಓಪನರ್​ಗಳಿಗೆ ಸಾಧ್ಯವಾಗದ ಮೈಲಿಗಲ್ಲೊಂದನ್ನು ದಾಟಲು ಕನ್ನಡಿಗ ಯಶಸ್ವಿಯಾಗಿದ್ದಾರೆ. ಈ ಯಶಸ್ಸಿನೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಓಪನರ್ ಎಂಬ ದಾಖಲೆ ಬರೆಯುವ ನಿರೀಕ್ಷೆಯಿದೆ.

4 / 5
ಈ ದಾಖಲೆ ಬರೆಯಲು ಕೆಎಲ್ ರಾಹುಲ್​ಗೆ ಇನ್ನು ಬೇಕಿರುವುದು ಕೇವಲ 45 ರನ್​ಗಳು ಮಾತ್ರ. ಐದನೇ ದಿನದಾಟದಲ್ಲಿ ಕೆಎಲ್​ಆರ್​ ನಲ್ವತ್ತೈದು ರನ್​ಗಳಿಸಿದರೆ 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಸುನಿಲ್ ಗವಾಸ್ಕರ್ ಬರೆದಿದ್ದ 542 ರನ್​ಗಳ ದಾಖಲೆಯನ್ನು ಅಳಿಸಿ ಹಾಕಿ ಕೆಎಲ್ ರಾಹುಲ್ ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆಯಲಿದ್ದಾರೆ. 

5 / 5

Published On - 8:25 am, Sun, 27 July 25

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!