ವಾಸ್ತವವಾಗಿ ಇಲ್ಲಿಯವರೆಗಿನ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾದ ಅತ್ಯಂತ ಪರಿಣಾಮಕಾರಿ ಮತ್ತು ಯಶಸ್ವಿ ಬ್ಯಾಟ್ಸ್ಮನ್ಗಳಲ್ಲಿ ಕೆಎಲ್ ರಾಹುಲ್ ಅಗ್ರಸ್ಥಾನದಲ್ಲಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ, ಆಸ್ಟ್ರೇಲಿಯಾದ ಸ್ಟಾರ್ ಟ್ರಾವಿಸ್ ಹೆಡ್ ನಂತರ, ಯಾವುದೇ ಒಬ್ಬ ಬ್ಯಾಟ್ಸ್‌ಮನ್ ಹೆಚ್ಚು ಸ್ಥಿರವಾಗಿ ಕಾಣಿಸಿಕೊಂಡಿದ್ದರೆ, ಅದು ರಾಹುಲ್ ಮಾತ್ರ.