KL Rahul: ಟೀಂ ಇಂಡಿಯಾಗೆ ಗುಡ್ ನ್ಯೂಸ್; ಏಷ್ಯಾಕಪ್​ಗೆ ಕೆಎಲ್ ರಾಹುಲ್ ಲಭ್ಯ..!

|

Updated on: Aug 04, 2023 | 12:48 PM

KL Rahul: ಮೇ 1, 2023 ರಿಂದ ಗಾಯದ ಕಾರಣದಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಸ್ಟಾರ್ ಇಂಡಿಯನ್ ಬ್ಯಾಟರ್ ಕೆಎಲ್ ರಾಹುಲ್ ಮುಂಬರುವ ಏಷ್ಯಾಕಪ್‌ಗೆ ಭಾರತ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ.

1 / 6
ಮೇ 1, 2023 ರಿಂದ ಗಾಯದ ಕಾರಣದಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಸ್ಟಾರ್ ಇಂಡಿಯನ್ ಬ್ಯಾಟರ್ ಕೆಎಲ್ ರಾಹುಲ್ ಮುಂಬರುವ ಏಷ್ಯಾಕಪ್‌ಗೆ ಭಾರತ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. 31 ವರ್ಷದ ಸ್ಟಾರ್ ಬಲಗೈ ಬ್ಯಾಟರ್, ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್​ಗೆ ಭಾರತದ ಮೊದಲ ಆಯ್ಕೆಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಆಗುವ ಸಾಧ್ಯತೆಯಿದೆ ಎಂದು ಶುಕ್ರವಾರ (ಆಗಸ್ಟ್ 4) ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

2 / 6
ಮೇ 1 ರಂದು ಲಕ್ನೋದಲ್ಲಿ ನಡೆದ ಐಪಿಎಲ್ ಪಂದ್ಯದ ವೇಳೆ ಗಾಯಗೊಂಡು ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕರ್ನಾಟಕದ ಬ್ಯಾಟ್ಸ್‌ಮನ್ ಈಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಆಯ್ಕೆಗೆ ಲಭ್ಯವಿದ್ದಾರೆ. ಅಲ್ಲದೆ ಈ ಬಾರಿಯ ಏಷ್ಯಾಕಪ್​ಗೆ ಟೀಂ ಇಂಡಿಯಾಕ್ಕೆ ಮರಳುವ ಸಾಧ್ಯತೆ ಎಂದು TOI ವರದಿ ಮಾಡಿದೆ.

3 / 6
2023ರ ಏಷ್ಯಾಕಪ್‌ ಆಗಸ್ಟ್ 30 ರಂದು ಮುಲ್ತಾನ್‌ನಲ್ಲಿ ಪಾಕಿಸ್ತಾನ ಮತ್ತು ನೇಪಾಳ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯ ಫೈನಲ್ ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ನಡೆಯಲಿದೆ. ಭಾರತವು ಸೆಪ್ಟೆಂಬರ್ 2 ರಂದು ಕೊಲಂಬೊದಲ್ಲಿ ಸಾಂಪ್ರದಾಯಿಕ ಎದುರಾಳಿಯಾದ ಪಾಕಿಸ್ತಾನ ವಿರುದ್ಧ ತನ್ನ ಖಾತೆಯನ್ನು ತೆರೆಯಲಿದೆ.

4 / 6
ಟೀಮ್ ಇಂಡಿಯಾಕ್ಕೆ ಕೆಎಲ್ ರಾಹುಲ್ ಮರಳುವುದು ತಂಡಕ್ಕೆ ಕೊಂಚ ಸಮಾಧಾನ ತರಲಿದೆ. ಏಕೆಂದರೆ  ಈಗಾಗಲೇ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅಲಭ್ಯತೆ ಭಾರತ ತಂಡಕ್ಕೆ ಭಾರಿ ಹಿನ್ನಡೆಯುಂಟು ಮಾಡಿತ್ತು. ಇದೀಗ ರಾಹುಲ್ ರೀ ಎಂಟ್ರಿಯಿಂದ ತಂಡದಲ್ಲಿ ಮಧ್ಯಮ ಕ್ರಮಾಂಕ ಬಲಿಷ್ಠಗೊಳ್ಳುವುದಲ್ಲದೆ, ವಿಕೆಟ್​ ಕೀಪಿಂಗ್​ ಕೂಡ ಮಾಡಲಿದ್ದಾರೆ.

5 / 6
ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರಿಹ್ಯಾಬ್​ನಲ್ಲಿರುವ ರಾಹುಲ್, ತರಬೇತುದಾರರು ಮತ್ತು ವೈದ್ಯಕೀಯ ತಜ್ಞರ ಸಲಹೆ ಮೇರೆಗೆ ತಮ್ಮ ಬ್ಯಾಟಿಂಗ್ ಹಾಗೂ ಕೀಪಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಈ ವಿಚಾರವನ್ನು ಸ್ವತಃ ರಾಹುಲ್ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಹಾಗೂ ಫೋಟೋಗಳ ಮೂಲಕ ನೀಡುತ್ತಿದ್ದಾರೆ.

6 / 6
ಟೀಂ ಇಂಡಿಯಾ ಪರ ಒಟ್ಟು 54 ಏಕದಿನ ಪಂದ್ಯಗಳನ್ನು ಆಡಿರುವ ರಾಹುಲ್, ಇದರಲ್ಲಿ 45.13ರ ಸರಾಸರಿಯಲ್ಲಿ 1986 ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದಾರೆ.