Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul Injury: ಐಪಿಎಲ್ 2023 ರಿಂದ ಕೆಎಲ್ ರಾಹುಲ್ ಹೊರಕ್ಕೆ: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದಲೂ ಔಟ್?

KL Rahul Ruled Out: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಗಂಭೀರವಾದ ತೊಡೆಯ ಗಾಯಕ್ಕೆ ಒಳಗಾದ ಕೆಎಲ್ ರಾಹುಲ್ ಐಪಿಎಲ್ 2023 ರಿಂದ ಹೊರಬಿದ್ದಿದ್ದಾರೆ. ಜೊತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ಗೂ ಅನುಮಾನ ಎಂದು ಕ್ರಿಕ್​ಬುಝ್ ವರದಿ ಮಾಡಿದೆ.

Vinay Bhat
|

Updated on:May 05, 2023 | 7:37 AM

ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಹಾಗೂ ಲಖನೌ ಸೂಪರ್ ಜೇಂಟ್ಸ್ ತಂಡದ ನಾಯಕನಾಗಿರುವ ಕೆಎಲ್ ರಾಹುಲ್ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹೊರಬಿದ್ದಿದ್ದಾರೆ. ಇದು ಎಲ್​ಎಸ್​ಜಿ ತಂಡಕ್ಕೆ ದೊಡ್ಡ ಆಘಾತವಾಗಿದೆ. ಅಲ್ಲದೆ ಭಾರತ ಕ್ರಿಕೆಟ್ ತಂಡಕ್ಕೂ ಹಿನ್ನಡೆ ಆಗಿದೆ.

1 / 7
ಸೋಮವಾರ (ಮೇ 1) ಲಖನೌದ ಏಕಾನಾ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಗಂಭೀರವಾದ ತೊಡೆಯ ಗಾಯಕ್ಕೆ ಒಳಗಾದ ರಾಹುಲ್ ಐಪಿಎಲ್ 2023 ರಿಂದ ಹೊರಬಿದ್ದಿದ್ದಾರೆ. ಜೊತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ಗೂ ಅನುಮಾನ ಎಂದು ಕ್ರಿಕ್​ಬುಝ್ ವರದಿ ಮಾಡಿದೆ.

2 / 7
ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಹೀಗಾಗಿ 2ನೇ ಓವರ್​ ಬಳಿಕ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಅಲ್ಲದೆ 11ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದರೂ ಓಡುವ ಸ್ಥಿತಿಯಲ್ಲಿರಲಿಲ್ಲ. ಇದೀಗ ತೊಡೆಯ ಗಾಯದ ಕಾರಣ ವೈದ್ಯಕೀಯ ಪರಿಶೀಲನೆಗೆ ಮುಂದಾಗಿದ್ದಾರೆ.

3 / 7
ಈಗಾಗಲೇ ಲಖನೌ ಫ್ರಾಂಚೈಸಿಯನ್ನು ಕೆಎಲ್​ ರಾಹುಲ್​ ತೊರೆದಿದ್ದು, ಮುಂಬೈಗೆ ತೆರಳಲಿದ್ದಾರೆ. ಅಲ್ಲಿ ತೊಡೆಯ ಗಾಯದ ಸ್ಕ್ಯಾನಿಂಗ್​ಗೆ ಒಳಗಾಗಿದ್ದಾರೆ. ಆದರೆ, ಸ್ಕ್ಯಾನಿಂಗ್ ರಿಪೋರ್ಟ್ ಬಗ್ಗೆ ಯಾರೂ ಮಾಹಿತಿ ಹೊರಹಾಕಿಲ್ಲ. ಲಖನೌ ಫ್ರಾಂಚೈಸಿಗೆ ಈ ಬಗ್ಗೆ ಮಾಹಿತಿ ಬಂದಿಲ್ಲ ಎಂದು ಹೇಳಲಾಗಿದೆ.

4 / 7
ಇನ್ನು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿರುವ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಜೂನ್ 7 ರಿಂದ 11 ರವರೆಗೆ ಓವಲ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023 ರ ಫೈನಲ್​ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇದರಿಂದಲೂ ರಾಹುಲ್ ಹೊರಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.

5 / 7
ರಾಹುಲ್ ಅವರ ಅನುಪಸ್ಥಿತಿಯಲ್ಲಿ ಲಖನೌದ ಮುಂಬರುವ ಪಂದ್ಯಗಳಲ್ಲಿ ಕೃನಾಲ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಇತ್ತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಿಂದ ರಾಹುಲ್ ಹೊರಬಿದ್ದರೆ ಮಯಾಂಕ್ ಅಗರ್ವಾಲ್ ಅಥವಾ ಇಶಾನ್ ಕಿಶನ್ ಆಯ್ಕೆ ಆಗುವ ಸಾಧ್ಯತೆ ಇದೆ.

6 / 7
ರಾಹುಲ್ ಅವರು ಮಂಡಿರಜ್ಜು ಅಥವಾ ಸೊಂಟದ ಗಾಯದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ. ಅವರ ಚಿಕಿತ್ಸೆಯ ಮೇಲ್ವಿಚಾರಣೆ ಮಾಡುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಗುರುವಾರ ರಾತ್ರಿಯವರೆಗೆ ತಂಡದ ನಿರ್ವಹಣೆ ಸೇರಿದಂತೆ ಸಂಬಂಧಿಸಿದ ಯಾರಿಗೂ ಈ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಾಗಿ ರಾಹುಲ್ ಅವರ ಗಾಯದ ಪ್ರಮಾಣ ಎಷ್ಟಿದೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.

7 / 7

Published On - 7:37 am, Fri, 5 May 23

Follow us
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ

ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ

ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?