ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅರ್ಧತಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಇದರೊಂದಿಗೆ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಜೊತೆಗೆ ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ನಂಬರ್ 1 ಒನ್ ತಂಡವಾಗಿದೆ.