AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರಂಭಿಕನಾಗಿ ರೋಹಿತ್, ಕೊಹ್ಲಿ ದಾಖಲೆ ಮುರಿದ ರಾಹುಲ್

KL Rahul's Historic IPL Record: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಸ್ಫೋಟಕ 75 ರನ್ ಗಳಿಸಿ ಮಿಂಚಿದರು. ಈ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಐಪಿಎಲ್‌ನಲ್ಲಿ ಆರಂಭಿಕ ಆಟಗಾರನಾಗಿ 200 ಸಿಕ್ಸರ್‌ಗಳ ಮೈಲಿಗಲ್ಲನ್ನು ದಾಟಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಾಹುಲ್ ಅವರ ಈ ಅದ್ಭುತ ಸಾಧನೆ ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಪ್ರಸ್ತುತ ಫಾರ್ಮ್‌ನಲ್ಲಿರುವ ರಾಹುಲ್ ಡೆಲ್ಲಿಗೆ ಭರವಸೆ ಮೂಡಿಸಿದ್ದಾರೆ.

ಪೃಥ್ವಿಶಂಕರ
|

Updated on: May 02, 2026 | 4:35 PM

Share
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿಯುವ ಕನ್ನಡಿಗ ಕೆಎಲ್ ರಾಹುಲ್ ಅದ್ಭುತ ಪ್ರದರ್ಶನ ನೀಡಿದರು. 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಪರ ಗೆಲುವಿನ ಇನ್ನಿಂಗ್ಸ್ ಆಡಿದ ರಾಹುಲ್ ಕೇವಲ 40 ಎಸೆತಗಳಲ್ಲಿ 75 ರನ್ ಗಳಿಸಿದರು.  ಈ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳು ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರಾಹುಲ್ ಐಪಿಎಲ್ ಇತಿಹಾಸದಲ್ಲಿ ಅಪರೂಪದ ಸಾಧನೆಯನ್ನು ಮಾಡಿದರು.

1 / 6
ಈ ಪಂದ್ಯದಲ್ಲಿ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಕೆಎಲ್ ರಾಹುಲ್ ಐಪಿಎಲ್ ಇತಿಹಾಸದಲ್ಲಿ ಆರಂಭಿಕ ಆಟಗಾರನಾಗಿ 200 ಸಿಕ್ಸರ್‌ಗಳ ಮೈಲಿಗಲ್ಲನ್ನು ದಾಟಿದರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ಸೃಷ್ಟಿಸಿದರು.

2 / 6
ಇಲ್ಲಿಯವರೆಗೆ, ಭಾರತದ ಯಾವುದೇ ಆರಂಭಿಕ ಆಟಗಾರ ಈ ಸಾಧನೆ ಮಾಡಿಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ, ಕ್ರಿಸ್ ಗೇಲ್ (326) ಮತ್ತು ಡೇವಿಡ್ ವಾರ್ನರ್ (210) ಮಾತ್ರ ರಾಹುಲ್‌ಗಿಂತ ಮುಂದಿದ್ದಾರೆ. ರಾಹುಲ್ ಪ್ರಸ್ತುತ 203 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

3 / 6
ಭಾರತೀಯ ಕ್ರಿಕೆಟ್‌ನಲ್ಲಿ ಅತ್ಯಂತ ವಿಶ್ವಾಸಾರ್ಹ ಆಟಗಾರ ಎಂದು ಕರೆಯಲ್ಪಡುವ ರಾಹುಲ್ ಆರಂಭಿಕ ಆಟಗಾರನಾಗಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇಲ್ಲಿಯವರೆಗೆ, ಅವರು ಐಪಿಎಲ್‌ನಲ್ಲಿ ಆರಂಭಿಕ ಆಟಗಾರನಾಗಿ 112 ಪಂದ್ಯಗಳನ್ನು ಆಡಿದ್ದ್ದು, 50.1 ಸರಾಸರಿಯಲ್ಲಿ 4851 ರನ್ ಗಳಿಸಿದ್ದಾರೆ. ಇದರಲ್ಲಿ 6 ಶತಕಗಳು ಮತ್ತು 39 ಅರ್ಧಶತಕಗಳು ಸೇರಿವೆ.

4 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವ ವಿರಾಟ್ ಕೊಹ್ಲಿ 192 ಸಿಕ್ಸರ್‌ಗಳೊಂದಿಗೆ ಈ ಪಟ್ಟಿಯಲ್ಲಿ ರಾಹುಲ್‌ ನಂತರದ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಅಗ್ರ ಐದರಲ್ಲಿಯೂ ಇಲ್ಲ, ಇದು ಎಲ್ಲರಿಗೂ ಆಶ್ಚರ್ಯಕರವಾಗಿದೆ. ಏಕೆಂದರೆ ಐಪಿಎಲ್‌ನಲ್ಲಿ ಭಾಗಶಃ ಆರಂಭಿಕರಾಗಿ ಆಡುವ ರೋಹಿತ್ ಸಿಕ್ಸರ್ ಬಾರಿಸುವುದರಲ್ಲಿ ಎತಿದ್ದ ಕೈ. ಆದಾಗ್ಯೂ ಅವರು ಈ ಪಟ್ಟಿಯಲ್ಲಿ ಟಾಪ್ 5 ರೊಳಗೆ ಸ್ಥಾನ ಪಡೆದಿಲ್ಲ.

5 / 6
ಇನ್ನು ಈ ಅವೃತ್ತಿಯಲ್ಲಿ ರಾಹುಲ್ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಮೊದಲೆರಡು ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡಿದ್ದ ರಾಹುಲ್, ಆ ನಂತರ ತಮ್ಮ ಫಾರ್ಮ್ ಕಂಡುಕೊಂಡಿದ್ದಾರೆ. ಡೆಲ್ಲಿ ಪರ ಇದುವರೆಗೆ 9 ಇನ್ನಿಂಗ್ಸ್‌ಗಳನ್ನಾಡಿರುವ ರಾಹುಲ್ 185.83 ಸ್ಟ್ರೈಕ್ ರೇಟ್‌ನಲ್ಲಿ 433 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಮೂರು ಅರ್ಧಶತಕಗಳು ಸೇರಿವೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ

ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?

ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು

ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು

3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್

4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ

ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ

ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ

ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ