KL Rahul: ಧೋನಿಯ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಎಂಟ್ರಿ

| Updated By: ಝಾಹಿರ್ ಯೂಸುಫ್

Updated on: Dec 27, 2023 | 12:19 PM

India vs South Africa: ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

1 / 5
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸುವ ಮೂಲಕ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತದ ವಿಕೆಟ್ ಕೀಪರ್​ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಅವರ ದಾಖಲೆಗಳನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 5
ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 105 ಎಸೆತಗಳಲ್ಲಿ 10 ಫೋರ್​ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 70 ರನ್ ಬಾರಿಸಿದ್ದರು. ಇದರೊಂದಿಗೆ ಮೂರು ಮಾದರಿಯಲ್ಲೂ ವಿದೇಶಿ ಪಿಚ್​ನಲ್ಲಿ 50+ ಸ್ಕೋರ್​ಗಳಿಸಿದ ಭಾರತದ ಮೂರನೇ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡರು.

3 / 5
ಇದಕ್ಕೂ ಮುನ್ನ ಭಾರತದ ವಿಕೆಟ್ ಕೀಪರ್ ಬ್ಯಾಟರ್​ಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಮಾತ್ರ ಈ ಸಾಧನೆ ಮಾಡಿದ್ದರು. ಪಂತ್ ಮತ್ತು ಧೋನಿ ವಿದೇಶದಲ್ಲಿ ನಡೆದ ಏಕದಿನ, ಟಿ20 ಮತ್ತು ಟೆಸ್ಟ್​ ಕ್ರಿಕೆಟ್​ನಲ್ಲಿ 50+ ಸ್ಕೋರ್​ಗಳಿಸಿ ವಿಶೇಷ ದಾಖಲೆ ಬರೆದಿದ್ದರು.

4 / 5
ಈ ಹಿಂದೆ ವಿದೇಶದಲ್ಲಿ ನಡೆದ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ 50+ ಸ್ಕೋರ್​ಗಳಿಸಿ ಮಿಂಚಿದ್ದರು. ಇದೀಗ ಟೆಸ್ಟ್​ನಲ್ಲೂ ವಿಕೆಟ್ ಕೀಪರ್ ಆಗಿ ಬಡ್ತಿ ಪಡೆದಿರುವ ರಾಹುಲ್ ಸೌತ್ ಆಫ್ರಿಕಾ ವಿರುದ್ಧ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಧೋನಿ-ಪಂತ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಪಟ್ಟಿಗೆ ಕೆಎಲ್ ರಾಹುಲ್ ಸೇರ್ಪಡೆಯಾಗಿದ್ದಾರೆ.

5 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಮೊದಲ ದಿನದಾಟದ ಮುಕ್ತಾಯದ ವೇಳೆ 8 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.