- Kannada News Photo gallery Cricket photos KL Rahul-led Team India jets off to Rajkot for India vs Australia third ODI
IND vs AUS 3rd ODI: ವಿಶ್ವಕಪ್ ಮುನ್ನ ಕೊನೆಯ ಚಾಲೆಂಜ್: ರಾಜ್ಕೋಟ್ಗೆ ಹೊರಟ ಟೀಮ್ ಇಂಡಿಯಾ ಆಟಗಾರರು
Team India jets off to Rajkot: ಭಾರತ ಸರಣಿ ಕ್ಲೀನ್ಸ್ವೀಪ್ ಮೇಲೆ ಕಣ್ಣಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಇದೀಗ ರಾಜ್ಕೋಟ್ಗೆ ಪ್ರಯಾಣ ಬೆಳೆಸಿದ್ದಾರೆ.
Updated on: Sep 25, 2023 | 10:59 AM

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಾಗಿದೆ. ಭಾನುವಾರ ಇಂದೋರ್ನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಶುಭ್ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಮನಮೋಹಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿ ಜಯ ಸಾಧಿಸಿತು.

ಇದೀಗ ಭಾರತ ಸರಣಿ ಕ್ಲೀನ್ಸ್ವೀಪ್ ಮೇಲೆ ಕಣ್ಣಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 27 ರಂದು ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಇದೀಗ ರಾಜ್ಕೋಟ್ಗೆ ಪ್ರಯಾಣ ಬೆಳೆಸಿದ್ದಾರೆ.

ಇಂದೋರ್ನಲ್ಲಿ ಹೆಚ್ಚು ವಿಶ್ರಾಂತಿಯನ್ನು ತೆಗೆದುಕೊಳ್ಳದೆ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಆರ್. ಅಶ್ವಿನ್ ಸೇರಿದಂತೆ ಇಬ್ಬರು ಆಟಗಾರರನ್ನು ಹೊರತು ಪಡಿಸಿ ಉಳಿದೆಲ್ಲ ಪ್ಲೇಯರ್ಸ್ ರಾಜ್ಕೋಟ್ಗೆ ತೆರಳಿದ್ದಾರೆ. ಶುಭ್ಮನ್ ಗಿಲ್ ಹಾಗೂ ಶಾರ್ದೂಲ್ ಠಾಕೂರ್ ಪ್ರಯಾಣ ಬೆಳೆಸಿಲ್ಲ.

ಅಂತಿಮ ಏಕದಿನ ಪಂದ್ಯದಿಂದ ಶುಭ್ಮನ್ ಗಿಲ್ ಅವರಿಗೆ ವಿಶ್ರಾಂತಿ ನೀಡಲು ಟೀಮ್ ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ. ಇವರ ಜೊತೆಗೆ ಶಾರ್ದೂಲ್ ಠಾಕೂರ್ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇವರಿಬ್ಬರು ಭಾರತವು ತಮ್ಮ ಐಸಿಸಿ ಏಕದಿನ ವಿಶ್ವಕಪ್ ಪ್ರಯಾಣವನ್ನು ಪ್ರಾರಂಭಿಸುವ ಗುವಾಹಟಿಯಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಇನ್ನು ಮೊದಲ ಎರಡು ಪಂದ್ಯದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂದು ರಾಜ್‌ಕೋಟ್‌ನಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್, ಕುಲ್ದೀಪ್ ಕೂಡ ಕಮ್ಬ್ಯಾಕ್ ಮಾಡುತ್ತಾರೆ.

ವಿಶ್ರಾಂತಿಯ ಕಾರಣ ಜಸ್ಪ್ರೀತ್ ಬುಮ್ರಾ ಎರಡನೇ ಏಕದಿನ ಪಂದ್ಯದಲ್ಲಿ ಆಡಲಿಲ್ಲ. ತಂಡದ ಮ್ಯಾನೇಜ್‌ಮೆಂಟ್ ಅವರಿಗೆ ಕುಟುಂಬವನ್ನು ನೋಡಲು ಮತ್ತು ಸ್ವಲ್ಪ ವಿರಾಮ ತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಬುಮ್ರಾ 3ನೇ ಏಕದಿನಕ್ಕೆ ಲಭ್ಯರಾಗಿದ್ದಾರೆ. ಇವರುಕೂಡ ಇಂದು ಟೀಮ್ ಇಂಡಿಯಾ ಕ್ಯಾಂಪ್ ಸೇರಲಿದ್ದಾರೆ.
