Asia Cup 2023: ಕನ್ನಡಿಗ ಕೆಎಲ್ ರಾಹುಲ್ ಏಷ್ಯಾಕಪ್ ಆಡುವುದು ಅನುಮಾನ..! ವರದಿ
Asia Cup 2023: ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಮೇ ತಿಂಗಳಲ್ಲಿ ಇಂಜುರಿಗೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಅವರು ಏಷ್ಯಾಕಪ್ ವೇಳೆಗೆ ಪೂರ್ಣ ಫಿಟ್ ಆಗಿ ತಂಡಕ್ಕೆ ಮರಳುವ ಸಾಧ್ಯತೆ ತೀರ ಕಡಿಮೆ ಎಂದು ವರದಿ ಮಾಡಿದೆ.
1 / 7
ಡಬ್ಯುಟಿಸಿ ಫೈನಲ್ ಸೋತ ಬಳಿಕ ಟೀಂ ಇಂಡಿಯಾ ಪ್ರಸ್ತುತ ಒಂದು ತಿಂಗಳ ವಿಶ್ರಾಂತಿಯಲ್ಲಿದೆ. ಬಳಿಕ ಮುಂದಿನ ತಿಂಗಳು ಜುಲೈನಲ್ಲಿ ವೆಸ್ಟ್ ಇಂಡೀಸ್ ಪ್ರಯಾಣ ಬೆಳೆಸುತ್ತಿದೆ. ಅಲ್ಲಿ ಟೆಸ್ಟ್, ಏಕದಿನ, ಹಾಗೂ ಟಿ20 ಸರಣಿಯನ್ನು ಆಡಲಿದೆ. ಆ ನಂತರ ಭಾರತದ ಮುಂದಿರುವ ಪ್ರಮುಖ ಸವಾಲೆಂದರೆ ಏಷ್ಯಾಕಪ್.
2 / 7
ಈ ಬಾರಿಯ ಏಷ್ಯಾಕಪ್ ಆಗಸ್ಟ್ 31 ರಿಂದ ಪ್ರಾರಂಭವಾಗುತ್ತಿದೆ. ಈ ಹಿಂದೆ ಇಂಜುರಿ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಪ್ರಮುಖ 3 ಆಟಗಾರರು ಏಷ್ಯಾಕಪ್ ವೇಳೆಗೆ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದರೀಗ ಟೀಂ ಇಂಡಿಯಾದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಏಷ್ಯಾಕಪ್ ವೇಳೆಗೆ ಫಿಟ್ ಆಗುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ.
3 / 7
ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಮೇ ತಿಂಗಳಲ್ಲಿ ಇಂಜುರಿಗೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಅವರು ಏಷ್ಯಾಕಪ್ ವೇಳೆಗೆ ಪೂರ್ಣ ಫಿಟ್ ಆಗಿ ತಂಡಕ್ಕೆ ಮರಳುವ ಸಾಧ್ಯತೆ ತೀರ ಕಡಿಮೆ ಎಂದು ವರದಿ ಮಾಡಿದೆ. ಪ್ರಸ್ತುತ ರಾಹುಲ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್ನೇಸ್ ಮೇಲೆ ಕೆಲಸ ಮಾಡುತ್ತಿದ್ದಾರೆ.
4 / 7
ವಾಸ್ತವವಾಗಿ ರಾಹುಲ್ 16ನೇ ಆವೃತ್ತಿಯ ಐಪಿಎಲ್ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಇಂಜುರಿಗೆ ತುತ್ತಾಗಿದ್ದರು. ಆನಂತರ ಅವರು ಅವರು ಮೇ ತಿಂಗಳ ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
5 / 7
ಅಲ್ಲದೆ ಕೆಎಲ್ ರಾಹುಲ್ ಅವರೊಂದಿಗೆ ಶ್ರೇಯಸ್ ಅಯ್ಯರ್ ಕೂಡ ತಂಡಕ್ಕೆ ಹಿಂದಿರುಗುವ ದಿನಾಂಕ ಇನ್ನು ಸ್ಪಷ್ಟವಾಗಿಲ್ಲ ಎಂದು ಕ್ರಿಕ್‌ಬಜ್‌ನ ವರದಿ ಮಾಡಿದೆ.
6 / 7
ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಹೊರತಾಗಿ, ಜಸ್ಪ್ರೀತ್ ಬುಮ್ರಾ ಮತ್ತು ರಿಷಬ್ ಪಂತ್ ಕೂಡ ಗಾಯದಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಪಂತ್ ಚೇತರಿಸಿಕೊಳ್ಳಲು ಇನ್ನೂ ಸಾಕಷ್ಟು ತೆಗೆದುಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಆಗಸ್ಟ್‌ನಲ್ಲಿ ಐರ್ಲೆಂಡ್ ವಿರುದ್ಧ ನಡೆಯಲ್ಲಿರುವ ಸರಣಿಯಲ್ಲಿ ಬುಮ್ರಾ ಅವರನ್ನು ಕಣಕ್ಕಿಳಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ಕ್ರಿಕ್‌ಬಜ್‌ನ ವರದಿ ಮಾಡಿದೆ.
7 / 7
ಏಷ್ಯಾಕಪ್ ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಈ ಬಾರಿಯ ಏಷ್ಯಾಕಪ್ಗೆ ಪಾಕಿಸ್ತಾನ ಆತಿಥ್ಯವಹಿಸಿದ್ದು, ಹೈಬ್ರಿಡ್ ಮಾದರಿಯಲ್ಲಿ ಈ ಏಷ್ಯಾಕಪ್ ನಡೆಯುತ್ತಿದೆ. ಅಂದರೆ 4 ಪಂದ್ಯಗಳು ಪಾಕ್ ನೆಲದಲ್ಲಿ ನಡೆದರೆ, ಇನ್ನುಳಿದ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲ್ಲಿವೆ.