KL Rahul: ಟಿ20 ತಂಡದಿಂದ ಕನ್ನಡಿಗ ಕೆಎಲ್ ರಾಹುಲ್ ಔಟ್..!

KL Rahul: ಟೀಮ್ ಇಂಡಿಯಾ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 37.75ರ ಸರಾಸರಿಯಲ್ಲಿ 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 08, 2024 | 6:53 AM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅಚ್ಚರಿ ಎಂದರೆ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕಾಣಿಸಿಕೊಂಡಿಲ್ಲ.

1 / 7
ಅಂದರೆ ಕೆಎಲ್ ರಾಹುಲ್ ಅವರನ್ನು ಟೀಮ್ ಇಂಡಿಯಾ ಟಿ20 ತಂಡದಿಂದ ಕೈ ಬಿಡಲಾಗಿದೆ. ಈ ಹಿಂದೆ ಭಾರತ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ರಾಹುಲ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳುವುದು ಅನುಮಾನ.

2 / 7
ಟೀಮ್ ಇಂಡಿಯಾ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 37.75ರ ಸರಾಸರಿಯಲ್ಲಿ 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪರ್ ಆಗಿಯೂ ರಾಹುಲ್ ಕಾಣಿಸಿಕೊಂಡಿದ್ದಾರೆ.

3 / 7
ಆದರೆ ಈ ಬಾರಿ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಜಿತೇಶ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್​ ಆಯ್ಕೆಯಾಗಿದ್ದಾರೆ. ಅಂದರೆ ಈ ಇಬ್ಬರು ಆಟಗಾರರು ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ವಿಫಲರಾದರೆ ಮಾತ್ರ ರಾಹುಲ್ ಅವರಿಗೆ ವಿಶ್ವಕಪ್ ಬಾಗಿಲು ತೆರೆದುಕೊಳ್ಳಲಿದೆ.

4 / 7
ಇನ್ನೊಂದೆಡೆ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ರಿಷಭ್ ಪಂತ್ ಕೂಡ ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಅಂದರೆ ಇಲ್ಲಿ ಕೆಎಲ್ ರಾಹುಲ್ ಮತ್ತೆ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನದಲ್ಲಿ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯಬೇಕಿದ್ದರೆ ಇಶಾನ್ ಕಿಶನ್ ಹಾಗೂ ರಿಷಭ್ ಪಂತ್ ಜೊತೆ ಪೈಪೋಟಿ ನಡೆಸಬೇಕಾದ ಅನಿವಾರ್ಯತೆ ಇದೆ.

5 / 7
ಒಟ್ಟಿನಲ್ಲಿ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಉತ್ತಮ ಪ್ರದರ್ಶನ ನೀಡಿದ್ದ 31 ವರ್ಷದ ಕೆಎಲ್ ರಾಹುಲ್ ಇದೀಗ ಟಿ20 ತಂಡದಿಂದ ಹೊರಬಿದ್ದಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 7
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

7 / 7
Follow us
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್