- Kannada News Photo gallery Cricket photos KL Rahul on the road to recovery after a successful surgery Sahres Photo on Twitter
KL Rahul: ಜರ್ಮನಿಯಿಂದ ಅಭಿಮಾನಿಗಳಿಗೆ ಸಂತಸದ ಸುದ್ದಿ ಕೊಟ್ಟ ಕೆಎಲ್ ರಾಹುಲ್: ಏನದು..?
KL Rahul Injury: ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.
Updated on: Jun 30, 2022 | 9:12 AM

ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರು ಇಂಜುರಿಯಿಂದ ಬಳಲುತ್ತಿದ್ದ ಕಾರಣ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಿತ್ತು. ಇದೀಗ ರಾಹುಲ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಈ ಬಗ್ಗೆ ರಾಹುಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಳ್ಳುವ ಮೂಲಕ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಗುಣಮುಖನಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲರಿಗೂ ನಮಸ್ಕಾರ. ಕಳೆದ ಒಂದೆರಡು ವಾರಗಳು ತುಂಬಾ ಕಠಿಣವಾಗಿದ್ದವು. ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ ಎಂದು ಬರೆದುಕೊಂಡಿದ್ದಾರೆ.

ರಾಹುಲ್ ಇಂಜುರಿಯಿಂದ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಜೊತೆಗೆ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಂಡಿದ್ದಾರೆ. ಸದ್ಯ ಗುಣಮುಖರಾಗುತ್ತಿರುವ ಕಾರಣ ಆದಷ್ಟು ಬೇಗ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ರಾಹುಲ್ ತನ್ನ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗುತ್ತಿರುವ ವೇಳೆ ಅವರ ಗೆಳತಿ ಅಥಿಯಾ ಶೆಟ್ಟಿ ಕೂಡ ತೆರಳಿದ್ದರು. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು.
