
T20 World Cup 2024: ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಕರ್ನಾಟಕದ ಕುವರ ಕೆಎಲ್ ರಾಹುಲ್ಗೆ (KL Rahul) ಸ್ಥಾನ ಲಭಿಸಿಲ್ಲ ಎಂಬುದೇ ಅಚ್ಚರಿ. ಈ ಬಾರಿಯ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ ಈ ಬಾರಿಯ ಐಪಿಎಲ್ನಲ್ಲಿ ಈವರೆಗೆ 9 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 3 ಅರ್ಧಶತಕಗಳೊಂದಿಗೆ ಒಟ್ಟು 378 ರನ್ ಕಲೆಹಾಕಿದ್ದಾರೆ. ಇದಾಗ್ಯೂ ರಾಹುಲ್ ಅವರನ್ನು ತಂಡದ ಆಯ್ಕೆಗೆ ಪರಿಗಣಿಸಲಾಗಿಲ್ಲ.

ಅಲ್ಲದೆ ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಹಾಗೆಯೇ ಪ್ರಮುಖ ಬ್ಯಾಟರ್ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಮೀಸಲು ಆಟಗಾರರಾಗಿ ನಾಲ್ವರು ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಶುಭ್ಮನ್ ಗಿಲ್ ಹಾಗೂ ರಿಂಕು ಸಿಂಗ್ ಬ್ಯಾಟರ್ಗಳಾಗಿ ಕಾಣಿಸಿಕೊಂಡರೆ, ಖಲೀಲ್ ಅಹ್ಮದ್ ಹಾಗೂ ಅವೇಶ್ ಖಾನ್ ಬೌಲರ್ಗಳಾಗಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲೂ ಕೆಎಲ್ ರಾಹುಲ್ಗೆ ಚಾನ್ಸ್ ಸಿಕ್ಕಿಲ್ಲ.

ಟಿ20 ವಿಶ್ವಕಪ್ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.