
ವೈಸ್ ಕ್ಯಾಪ್ಟನ್... ಕ್ಯಾಪ್ಟನ್... ವೈಸ್ ಕ್ಯಾಪ್ಟನ್... ಮೂರು ವರ್ಷಗಳ ಬಳಿಕ ಮತ್ತೆ ವೈಸ್ ಕ್ಯಾಪ್ಟನ್. ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಕೆ.ಎಲ್. ರಾಹುಲ್ (KL Rahul) ಅವರ ನಾಯಕತ್ವದ ಅಧ್ಯಾಯ ಆರಂಭವಾಗಿದ್ದು ಅನಿರೀಕ್ಷಿತ ತಿರುವಿನೊಂದಿಗೆ. ಆರಂಭಿಕ ಬ್ಯಾಟರ್ ಆಗಿ ತಂಡದಲ್ಲಿ ನೆಲೆ ಕಂಡುಕೊಂಡಿದ್ದ ಅವರಿಗೆ, ಹಿರಿಯ ಆಟಗಾರರ ಗೈರುಹಾಜರಿಯು ತಂಡವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿಯನ್ನು ತಂದುಕೊಟ್ಟಿತು. (PC: BCCI)

ಮೊದಲ ಬಾರಿ ಉಪನಾಯಕತ್ವ: ಡಿಸೆಂಬರ್ 2021 ರ ಸೌತ್ ಆಫ್ರಿಕಾ ಸರಣಿ ವೇಳೆ ರೋಹಿತ್ ಶರ್ಮಾ ಗಾಯಗೊಂಡಾಗ ರಾಹುಲ್ ಅವರನ್ನು ಮೊದಲ ಬಾರಿಗೆ ಟೆಸ್ಟ್ ತಂಡದ ಉಪನಾಯಕರನ್ನಾಗಿ ಮಾಡಲಾಗಿತ್ತು. (PC: Google)

ಖಾಯಂ ಉಪನಾಯಕ: ತದನಂತರ 2022 ರ ಶ್ರೀಲಂಕಾ ಸರಣಿಯಿಂದ ಭಾರತ ಟೆಸ್ಟ್ ತಂಡದ ಖಾಯಂ ವೈಸ್ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದರು. ಅದರಂತೆ ಒಂದು ವರ್ಷಗಳ ಕಾಲ ಟೀಮ್ ಇಂಡಿಯಾದ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. (PC: Google)

ಟೆಸ್ಟ್ ಕ್ಯಾಪ್ಟನ್ಸಿ: ಈ ಅವಧಿಯಲ್ಲಿ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ರಾಹುಲ್ ಅವರು ಸೌತ್ ಆಫ್ರಿಕಾ ಮತ್ತು ಬಾಂಗ್ಲಾದೇಶ್ ವಿರುದ್ಧದ ಒಟ್ಟು 3 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದಾರೆ. (PC: Google)

ಕೈ ತಪ್ಪಿದ ವೈಸ್ ಕ್ಯಾಪ್ಟನ್ ಪಟ್ಟ: 2023ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣ, ಅವರನ್ನು ಉಪನಾಯಕತ್ವದಿಂದ ಕೆಳಗಿಳಿಸಲಾಯಿತು. ಅಷ್ಟೇ ಅಲ್ಲದೆ, ಸರಣಿಯ ಕೊನೆಯ ಎರಡು ಪಂದ್ಯಗಳ ಪ್ಲೇಯಿಂಗ್-11 ನಿಂದಲೇ ಕೈಬಿಟ್ಟು, ಅವರ ಜಾಗಕ್ಕೆ ಶುಭ್ಮನ್ ಗಿಲ್ ಅವರಿಗೆ ಅವಕಾಶ ನೀಡಲಾಗಿತ್ತು. (PC: Google)

ಇದೀಗ ಬರೋಬ್ಬರಿ ಮೂರು ವರ್ಷಗಳ ಬಳಿಕ ಕೆಎಲ್ ರಾಹುಲ್ ಮತ್ತೆ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ರಿಷಭ್ ಪಂತ್ ಅವರವನ್ನು ವೈಸ್ ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸಲಾಗಿದ್ದು, ಅವರ ಬದಲಿಗೆ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಿದ್ದಾರೆ. (PC: Google)

ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.