AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಭಾರತ ತಂಡದಲ್ಲಿ ಕೆಎಲ್ ರಾಹುಲ್​ಗೆ ಇಲ್ಲ ಚಾನ್ಸ್..!

Asia Cup 2025 KL Rahul: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ 1 ಶತಕ ಹಾಗೂ 3 ಅರ್ಧಶತಕಗಳೊಂದಿಗೆ 539 ರನ್ ಕಲೆಹಾಕಿದ್ದ ಕೆಎಲ್ ರಾಹುಲ್ ಅವರಿಗೆ ಈ ಬಾರಿಯ ಏಷ್ಯಾಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಕಳೆದ ಬಾರಿ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ರಾಹುಲ್ ಇದೀಗ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 19, 2025 | 3:00 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2025) ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ.

1 / 6
ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಹೀಗಾಗಿ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್​ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಬದಲಾಗಿ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

2 / 6
ಇತ್ತ ಕೆಎಲ್ ರಾಹುಲ್ ಭಾರತದ ಪರ ಟಿ20 ಪಂದ್ಯವಾಡಿ ವರ್ಷ ಕಳೆದಿದೆ. ಅದರಲ್ಲೂ 2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆ ರಾಹುಲ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನು ಈ ವರ್ಷದ ಆರಂಭದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲೂ ಕೆಎಲ್ಆರ್​​ಗೆ ಚಾನ್ಸ್ ನೀಡಿರಲಿಲ್ಲ.

3 / 6
ಇದಾಗ್ಯೂ ಕಳೆದ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ 539 ರನ್ ಕಲೆಹಾಕಿ ಮಿಂಚಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಅವಕಾಶವನ್ನು ನಿರೀಕ್ಷಿಸಲಾಗಿತ್ತು. ಆದರೀಗ ಭಾರತ ಟಿ20 ತಂಡ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಆವರ ಹೆಸರು ಕಾಣಿಸಿಕೊಂಡಿಲ್ಲ. ಹೀಗಾಗಿ ಕೆಎಲ್ ರಾಹುಲ್ ಅವರ ಟಿ20 ಕೆರಿಯರ್ ಅಂತ್ಯ ಎಂದರೆ ತಪ್ಪಾಗಲಾರದು.

4 / 6
ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಈವರೆಗೆ 72 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 68 ಇನಿಂಗ್ಸ್ ಆಡಿರುವ ಅವರು 2265 ರನ್ ಕಲೆ ಹಾಕಿದ್ದಾರೆ. ಇದರ ನಡುವೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ