IND vs WI: ಅರ್ಧಶತಕ ಸಿಡಿಸಿ ಭಾರತಕ್ಕೆ ಭರ್ಜರಿ ಆರಂಭ ನೀಡಿದ ಕೆಎಲ್ ರಾಹುಲ್

Updated on: Oct 02, 2025 | 5:35 PM

KL Rahul half century: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್‌ನ ಮೊದಲ ದಿನ, ವಿಂಡೀಸ್ ತಂಡ 162 ರನ್‌ಗಳಿಗೆ ಆಲೌಟ್ ಆಯಿತು. ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ಮಾಡಿದರು. ಪ್ರತಿಯಾಗಿ, ಕೆಎಲ್ ರಾಹುಲ್ ಅಮೋಘ ಅರ್ಧಶತಕ ಗಳಿಸಿ ಭಾರತಕ್ಕೆ ಬಲವಾದ ಆರಂಭ ನೀಡಿದರು. ಯಶಸ್ವಿ ಜೈಸ್ವಾಲ್ ಕೂಡ ಉತ್ತಮ ಕೊಡುಗೆ ನೀಡಿದರು. ಭಾರತೀಯ ತಂಡ ಪ್ರಬಲ ಸ್ಥಿತಿಯಲ್ಲಿದೆ.

1 / 5
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ವಿಂಡೀಸ್ ತಂಡವನ್ನು 162 ರನ್​ಗಳಿಗೆ ಆಲೌಟ್ ಮಾಡಿರುವ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದು, ತಂಡದ ಸ್ಟಾರ್ ಓಪನರ್ ಕೆಎಲ್ ರಾಹುಲ್ ಮೊದಲ ದಿನವೇ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ.

2 / 5
ರೋಹಿತ್ ಶರ್ಮಾ ನಿವೃತ್ತಿಯ ಬಳಿಕ ಆರಂಭಿಕ ಆಟಗಾರನಾಗಿ ಬಡ್ತಿ ಪಡೆದಿರುವ ರಾಹುಲ್, ಇಂಗ್ಲೆಂಡ್‌ ಪ್ರವಾಸದಲ್ಲಿ ತೋರಿದ್ದ ಅಮೋಘ ಪ್ರದರ್ಶನವನ್ನು ಇದೀಗ ವೆಸ್ಟ್ ಇಂಡೀಸ್ ವಿರುದ್ಧವೂ ಮುಂದುವರೆಸಿದ್ದಾರೆ. ತಂಡದ ಪರ ತಾಳ್ಮೆಯ ಇನ್ನಿಂಗ್ಸ್ ಕಟ್ಟುತ್ತಿರುವ ರಾಹುಲ್ 110 ಎಸೆತಗಳಲ್ಲಿ ಅರ್ಧಶತಕ ಪೂರೈಸಿದಲ್ಲದೆ ತಂಡವನ್ನು ಶತಕದ ಗಡಿ ದಾಟಿಸಿದ್ದಾರೆ.

3 / 5
ಭಾರತದ ವಿರುದ್ಧದ ಈ ಪಂದ್ಯದಲ್ಲಿ, ವೆಸ್ಟ್ ಇಂಡೀಸ್ ತಂಡವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದಾಗ್ಯೂ ಭಾರತದ ಬೌಲಿಂಗ್ ಮುಂದೆ ತತ್ತರಿಸಿದ ವಿಂಡೀಸ್ 162 ರನ್‌ಗಳಿಗೆ ಆಲೌಟ್ ಆಯಿತು. ಆ ನಂತರ ಇನ್ನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್‌ಗೆ 68 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

4 / 5
ಈ ಹಂತದಲ್ಲಿ ಹೊಡಿಬಡಿ ಆಟಕ್ಕೆ ಮುಂದಾದ ಯಶಸ್ವಿ ಜೈಸ್ವಾಲ್ 54 ಎಸೆತಗಳಲ್ಲಿ 36 ರನ್‌ಗಳಿಸಿ ಔಟಾದರು. ಆ ನಂತರ ಬಂದ ಸಾಯಿ ಸುದರ್ಶನ್ ಕೂಡ  ಹೆಚ್ಚೇನೂ ಮಾಡಲು ಸಾಧ್ಯವಾಗದೆ ಕೇವಲ ಏಳು ರನ್ ಗಳಿಸಿ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಯಾದ ನಾಯಕ ಗಿಲ್, ರಾಹುಲ್​ಗೆ ಉತ್ತಮ ಸಾಥ್ ನೀಡುತ್ತಿದ್ದಾರೆ.

5 / 5
ವೆಸ್ಟ್ ಇಂಡೀಸ್ ಇನ್ನಿಂಗ್ಸ್ ಬಗ್ಗೆ ಹೇಳುವುದಾದರೆ.. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 162 ರನ್‌ಗಳಿಗೆ ಆಲೌಟ್ ಆಯಿತು.  ವೆಸ್ಟ್ ಇಂಡೀಸ್ ಪರ ಜಸ್ಟಿನ್ ಗ್ರೀವ್ 32 ರನ್ ಗಳಿಸಿದರೆ, ನಾಯಕ ರೋಸ್ಟನ್ ಚೇಸ್ 24 ಮತ್ತು ಶೈ ಹೋಪ್ 26 ರನ್ ಗಳಿಸಿದರು. ಭಾರತದ ಪರ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಪಡೆದರು. ಉಳಿದಂತೆ ಕುಲ್ದೀಪ್ ಯಾದವ್ ಎರಡು, ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಪಡೆದರು.