IND vs SL: ತವರು ನೆಲದಲ್ಲಿ ಭಾರತವೇ ಬೆಸ್ಟ್! ಪಿಂಕ್ ಬಾಲ್ ಟೆಸ್ಟ್​ನಲ್ಲಿ ಟೀಂ ಇಂಡಿಯಾಕ್ಕಿಲ್ಲ ಸರಿಸಾಟಿ

IND vs SL: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರದಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಹಗಲು-ರಾತ್ರಿ ಪಂದ್ಯ ಆರಂಭವಾಗುತ್ತಿದ್ದು, ಇದರಲ್ಲಿ ಭಾರತ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಪ್ರಯತ್ನಿಸಲಿದೆ.

ಪೃಥ್ವಿಶಂಕರ
|

Updated on: Mar 11, 2022 | 7:40 PM

ಮೊಹಾಲಿ ರೇಸ್ ಗೆದ್ದ ನಂತರ, ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡವು ಇದೀಗ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ. ಮೊದಲ ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಭಾರತ ಇದೀಗ ಸರಣಿ ಗೆಲ್ಲುವತ್ತ ಗಮನ ಹರಿಸಿದೆ. ಈ ಕ್ರೀಡಾಂಗಣದಲ್ಲಿ ಇದು ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಈ ಪಂದ್ಯಕ್ಕೂ ಮುನ್ನ ತಿಳಿದುಕೊಳ್ಳಬೇಕಾದ ಕೆಲವು ಕುತೂಹಲಕಾರಿ ವಿಷಯಗಳು ಇಲ್ಲಿವೆ.

1 / 5
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಮಾಡಲು ಬಯಸುತ್ತದೆ. ಆರಂಭದ ಅವಧಿ ಮುಗಿದ ನಂತರ ರನ್ ಗಳಿಸಲು ಅನುಕೂಲವಾಗಿರುವ ಇಲ್ಲಿನ ಪಿಚ್ ಇದಕ್ಕೆ ಕಾರಣ. ಈ ಕ್ರೀಡಾಂಗಣದಲ್ಲಿ ಕಳೆದ ಐದು ಟೆಸ್ಟ್ ಪಂದ್ಯಗಳ ಅಂಕಿಅಂಶಗಳನ್ನು ಗಮನಿಸಿದರೆ, ಈ ಕ್ರೀಡಾಂಗಣದಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 344 ರನ್ ಆಗಿದೆ. ಇದು ಎರಡೂ ತಂಡಗಳನ್ನು ಮೊದಲು ಬ್ಯಾಟಿಂಗ್ ಮಾಡಲು ಪ್ರೇರೇಪಿಸುತ್ತದೆ. ಇದೇ ಕ್ರೀಡಾಂಗಣದಲ್ಲಿ ಭಾರತ ಅಫ್ಘಾನಿಸ್ತಾನ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿತ್ತು.

2 / 5
ಆದರೆ ಭಾರತದಲ್ಲಿ ಆಡಿದ ಎರಡು ಹಗಲು-ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನ ಅಂಕಿಅಂಶಗಳನ್ನು ನಾವು ನೋಡಿದರೆ ಇದು ಭಾರಿ ಆಸಕ್ತಿದಾಯಕವಾಗಿದೆ. ಭಾರತದ ನೆಲದಲ್ಲಿ ಆಡಿದ ಕೊನೆಯ ಎರಡು ಹಗಲು-ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ, ಮೊದಲ ಇನ್ನಿಂಗ್ಸ್‌ನಲ್ಲಿ ಕ್ರಮವಾಗಿ 106 ಮತ್ತು 112 ರನ್ ಗಳಿಸಲಾಗಿದೆ.

3 / 5
 ಬಾಂಗ್ಲಾದೇಶ ಭಾರತದಲ್ಲಿ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿದೆ. ಈ ಪಂದ್ಯದಲ್ಲಿ ಆತಿಥೇಯರು ಇನಿಂಗ್ಸ್ ಮತ್ತು 46 ರನ್‌ಗಳ ಜಯ ಸಾಧಿಸಿದರು. ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 106 ರನ್ ಗಳಿಸಲು ಶಕ್ತವಾಯಿತು ಮತ್ತು ಭಾರತವು ಒಂಬತ್ತು ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಿತು.

4 / 5
ಭಾರತದಲ್ಲಿ ಎರಡನೇ ಹಗಲು-ರಾತ್ರಿ ಟೆಸ್ಟ್ ಪಂದ್ಯ ಅಹಮದಾಬಾದ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 112 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯವನ್ನು ಭಾರತ 10 ವಿಕೆಟ್‌ಗಳಿಂದ ಗೆದ್ದುಕೊಂಡಿತು.

5 / 5
Follow us
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ