IND vs SL: ತವರು ನೆಲದಲ್ಲಿ ಭಾರತವೇ ಬೆಸ್ಟ್! ಪಿಂಕ್ ಬಾಲ್ ಟೆಸ್ಟ್ನಲ್ಲಿ ಟೀಂ ಇಂಡಿಯಾಕ್ಕಿಲ್ಲ ಸರಿಸಾಟಿ
IND vs SL: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರದಿಂದ ಭಾರತ ಮತ್ತು ಶ್ರೀಲಂಕಾ ನಡುವೆ ಹಗಲು-ರಾತ್ರಿ ಪಂದ್ಯ ಆರಂಭವಾಗುತ್ತಿದ್ದು, ಇದರಲ್ಲಿ ಭಾರತ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಪ್ರಯತ್ನಿಸಲಿದೆ.
1 / 5
ಮೊಹಾಲಿ ರೇಸ್ ಗೆದ್ದ ನಂತರ, ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡವು ಇದೀಗ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ. ಮೊದಲ ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಭಾರತ ಇದೀಗ ಸರಣಿ ಗೆಲ್ಲುವತ್ತ ಗಮನ ಹರಿಸಿದೆ. ಈ ಕ್ರೀಡಾಂಗಣದಲ್ಲಿ ಇದು ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಈ ಪಂದ್ಯಕ್ಕೂ ಮುನ್ನ ತಿಳಿದುಕೊಳ್ಳಬೇಕಾದ ಕೆಲವು ಕುತೂಹಲಕಾರಿ ವಿಷಯಗಳು ಇಲ್ಲಿವೆ.
2 / 5
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಮಾಡಲು ಬಯಸುತ್ತದೆ. ಆರಂಭದ ಅವಧಿ ಮುಗಿದ ನಂತರ ರನ್ ಗಳಿಸಲು ಅನುಕೂಲವಾಗಿರುವ ಇಲ್ಲಿನ ಪಿಚ್ ಇದಕ್ಕೆ ಕಾರಣ. ಈ ಕ್ರೀಡಾಂಗಣದಲ್ಲಿ ಕಳೆದ ಐದು ಟೆಸ್ಟ್ ಪಂದ್ಯಗಳ ಅಂಕಿಅಂಶಗಳನ್ನು ಗಮನಿಸಿದರೆ, ಈ ಕ್ರೀಡಾಂಗಣದಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 344 ರನ್ ಆಗಿದೆ. ಇದು ಎರಡೂ ತಂಡಗಳನ್ನು ಮೊದಲು ಬ್ಯಾಟಿಂಗ್ ಮಾಡಲು ಪ್ರೇರೇಪಿಸುತ್ತದೆ. ಇದೇ ಕ್ರೀಡಾಂಗಣದಲ್ಲಿ ಭಾರತ ಅಫ್ಘಾನಿಸ್ತಾನ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿತ್ತು.
3 / 5
ಆದರೆ ಭಾರತದಲ್ಲಿ ಆಡಿದ ಎರಡು ಹಗಲು-ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನ ಅಂಕಿಅಂಶಗಳನ್ನು ನಾವು ನೋಡಿದರೆ ಇದು ಭಾರಿ ಆಸಕ್ತಿದಾಯಕವಾಗಿದೆ. ಭಾರತದ ನೆಲದಲ್ಲಿ ಆಡಿದ ಕೊನೆಯ ಎರಡು ಹಗಲು-ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ, ಮೊದಲ ಇನ್ನಿಂಗ್ಸ್‌ನಲ್ಲಿ ಕ್ರಮವಾಗಿ 106 ಮತ್ತು 112 ರನ್ ಗಳಿಸಲಾಗಿದೆ.
4 / 5
ಬಾಂಗ್ಲಾದೇಶ ಭಾರತದಲ್ಲಿ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿದೆ. ಈ ಪಂದ್ಯದಲ್ಲಿ ಆತಿಥೇಯರು ಇನಿಂಗ್ಸ್ ಮತ್ತು 46 ರನ್‌ಗಳ ಜಯ ಸಾಧಿಸಿದರು. ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 106 ರನ್ ಗಳಿಸಲು ಶಕ್ತವಾಯಿತು ಮತ್ತು ಭಾರತವು ಒಂಬತ್ತು ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಿತು.
5 / 5
ಭಾರತದಲ್ಲಿ ಎರಡನೇ ಹಗಲು-ರಾತ್ರಿ ಟೆಸ್ಟ್ ಪಂದ್ಯ ಅಹಮದಾಬಾದ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 112 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯವನ್ನು ಭಾರತ 10 ವಿಕೆಟ್‌ಗಳಿಂದ ಗೆದ್ದುಕೊಂಡಿತು.