AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krunal Pandya IPL Auction 2025: ಆರ್​ಸಿಬಿಗೆ ಬಂದ ಹಾರ್ದಿಕ್ ಪಾಂಡ್ಯ ಸಹೋದರ

Krunal Pandya IPL Auction 2025: ಮುಂಬೈ ಇಂಡಿಯನ್ಸ್‌ನೊಂದಿಗೆ ವೃತ್ತಿಜೀವನವನ್ನು ಪ್ರಾರಂಭಿಸಿ ನಂತರ ಲಕ್ನೋ ಸೂಪರ್ ಜೈಂಟ್ಸ್‌ಗೆ ತೆರಳಿದ್ದ ಕೃನಾಲ್ ಪಾಂಡ್ಯ ಈಗ ಹೊಸ ತಂಡವನ್ನು ಕಂಡುಕೊಂಡಿದ್ದಾರೆ. ಮೆಗಾ ಹರಾಜಿನಲ್ಲಿ ಕೃನಾಲ್ ಪಾಂಡ್ಯರನ್ನು 5.75 ಕೋಟಿ ರೂಗೆ ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು.

ಪೃಥ್ವಿಶಂಕರ
|

Updated on: Nov 25, 2024 | 4:15 PM

Share
ಐಪಿಎಲ್ ಮೆಗಾ ಹರಾಜಿನ ಎರಡನೇ ದಿನವಾದ ಇಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಮೊದಲ ಖರೀದಿಯಾಗಿ ಟೀಂ ಇಂಡಿಯಾದ ಸ್ಪಿನ್ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

1 / 5
ಕೃನಾಲ್ ಪಾಂಡ್ಯ ಖರೀದಿಗಾಗಿ ಬೆಂಗಳೂರು ಮತ್ತು ರಾಜಸ್ಥಾನ ನಡುವೆ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ರೂ 5.75 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

2 / 5
2016 ರಲ್ಲಿ ತಮ್ಮ ಮೊದಲ ಐಪಿಎಲ್ ಪಂದ್ಯವನ್ನು ಆಡಿದ್ದ ಕೃನಾಲ್ ಪಾಂಡ್ಯ, ಆರ್​ಸಿಗೆ ಸೇರುವ ಮೊದಲು, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡದ ಪರ ಆಡಿದ್ದರು. 2021 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿದ್ದ ಕೃನಾಲ್​ರನ್ನು ಲಕ್ನೋ ಫ್ರಾಂಚೈಸ್ 8.25 ಕೋಟಿ ರೂಪಾಯಿ ಪಾವತಿಸುವ ಮೂಲಕ ತಂಡಕ್ಕೆ ಸೇರಿಸಿಕೊಂಡಿತ್ತು.

3 / 5
ಆದರೆ, ತಂಡದ ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡಲು ಕೃನಾಲ್​ಗೆ ಸಾಧ್ಯವಾಗಿರಲಿಲ್ಲ. ಬ್ಯಾಟಿಂಗ್‌ ಮತ್ತು ಬೌಲಿಂಗ್ ಎರಡರಲ್ಲೂ ಅವರ ವಿಫಲ ಪ್ರದರ್ಶನವು ಎಲ್ಲರನ್ನು ನಿರಾಶೆಗೊಳಿಸಿತು, ಇದರಿಂದಾಗಿ ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್‌ನಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ವಿಫಲರಾದರು.

4 / 5
ಇನ್ನು ಐಪಿಎಲ್‌ನಲ್ಲಿ 127 ಪಂದ್ಯಗಳನ್ನು ಆಡಿರುವ ಕೃನಾಲ್ 132.82 ರ ಸ್ಟ್ರೈಕ್ ರೇಟ್ ಹಾಗೂ 22.56ರ ಸರಾಸರಿಯೊಂದಿಗೆ 1,647 ರನ್‌ ಕಲೆಹಾಕಿದ್ದಾರೆ. ಹಾಗೆಯೇ ಸ್ಪಿನ್ ಬೌಲರ್ ಆಗಿರುವ ಕೃನಾಲ್, ಇದುವರೆಗೆ ಆಡಿರುವ 127 ಪಂದ್ಯಗಳಲ್ಲಿ 34.28 ರ ಸರಾಸರಿ ಮತ್ತು 7.36 ರ ಎಕಾನಮಿ ದರದಲ್ಲಿ 76 ವಿಕೆಟ್‌ಗಳನ್ನು ಪಡೆದಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​