4 ವರ್ಷಗಳ ಬಳಿಕ ಟೀಮ್ ಇಂಡಿಯಾದಲ್ಲಿ RCB ಆಟಗಾರನಿಗೆ ಚಾನ್ಸ್​..!

Updated on: Aug 07, 2025 | 2:58 PM

Asia Cup 2025: Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಇನ್ನು ಗ್ರೂಪ್-ಎ ನಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡದಲ್ಲಿ ಆರ್​ಸಿಬಿ ತಂಡದ ಆಟಗಾರನಿಗೂ ಚಾನ್ಸ್ ಸಿಗಲಿದೆ ಎಂದು ವರದಿಯಾಗಿದೆ.

1 / 5
ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನಕ್ಕಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಿದ್ದಾರೆ. 15 ಸದಸ್ಯರ ಈ ತಂಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದ ಹಿರಿಯ ಆಟಗಾರ ಕಾಣಿಸಿಕೊಳ್ಳುವುದು ಖಚಿತ ಎಂದು ವರದಿಯಾಗಿದೆ.

ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನಕ್ಕಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಿದ್ದಾರೆ. 15 ಸದಸ್ಯರ ಈ ತಂಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದ ಹಿರಿಯ ಆಟಗಾರ ಕಾಣಿಸಿಕೊಳ್ಳುವುದು ಖಚಿತ ಎಂದು ವರದಿಯಾಗಿದೆ.

2 / 5

ಕ್ರಿಕೆಟ್​ ನೆಕ್ಸ್ಟ್​ ವರದಿ ಪ್ರಕಾರ, ಏಷ್ಯಾಕಪ್​ಗಾಗಿ ಆರ್​ಸಿಬಿ ತಂಡದ ಸ್ಟಾರ್ ಆಲ್​ರೌಂಡರ್ ಕೃನಾಲ್ ಪಾಂಡ್ಯರನ್ನು ಪರಿಗಣಿಸಲಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಕೃನಾಲ್ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಸೀನಿಯರ್ ಪಾಂಡ್ಯರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

3 / 5

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಚೊಚ್ಚಲ ಬಾರಿ ಕಣಕ್ಕಿಳಿದಿದ್ದ ಕೃನಾಲ್ ಪಾಂಡ್ಯ 15 ಪಂದ್ಯಗಳಿಂದ 17 ವಿಕೆಟ್ ಕಬಳಿಸಿದ್ದರು. ಅದು ಕೂಡ 8.24 ಎಕಾನಮಿ ರೇಟ್​ನಲ್ಲಿ. ಅಲ್ಲದೆ ಬ್ಯಾಟ್ ಮೂಲಕ 109 ರನ್​ಗಳ ಕೊಡುಗೆ ನೀಡಿದ್ದರು. ಹೀಗಾಗಿ ಸ್ಪಿನ್ ಆಲ್​ರೌಂಡರ್ ಆಗಿ ಕೃನಾಲ್ ಪಾಂಡ್ಯರನ್ನು ಆಯ್ಕೆ ಮಾಡಲು ಆಯ್ಕೆದಾರರು ಆಸಕ್ತಿ ಹೊಂದಿದ್ದಾರೆ.

4 / 5

ಕುತೂಹಲಕಾರಿ ವಿಷಯ ಎಂದರೆ ಕೃನಾಲ್ ಪಾಂಡ್ಯ ಟೀಮ್ ಇಂಡಿಯಾ ಪರ 2018 ರಲ್ಲೇ ಪಾದಾರ್ಪಣೆ ಮಾಡಿದ್ದರು. ಅಲ್ಲದೆ ಕೊನೆಯ ಬಾರಿ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದು 2021 ರಲ್ಲಿ. ಇದಾದ ಬಳಿಕ ಭಾರತ ತಂಡದಿಂದ ಹೊರಬಿದ್ದಿದ್ದ ಸೀನಿಯರ್ ಪಾಂಡ್ಯಗೆ ಈ ಬಾರಿಯ ಏಷ್ಯಾಕಪ್​ನಲ್ಲಿ ಮತ್ತೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

5 / 5

ಕೃನಾಲ್ ಪಾಂಡ್ಯ ಈವರೆಗೆ ಭಾರತ ತಂಡದ ಪರ 19 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 10 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 124 ರನ್​ ಕಲೆಹಾಕಿದ್ದಾರೆ. ಅಲ್ಲದೆ 15 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ್ದ ಕೃನಾಲ್ ಪಾಂಡ್ಯ ಇದೀಗ 4 ವರ್ಷಗಳ ಬಳಿಕ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.

Loading...
Unable to load recommendations.
Follow Us