AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ಗೂ ಮುನ್ನ ನ್ಯೂಝಿಲೆಂಡ್​ಗೆ ಆಘಾತ: ಸ್ಟಾರ್ ಆಟಗಾರ ಔಟ್..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಿಂದ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯಗೊಂಡಿರು ಕಿವೀಸ್ ವೇಗಿ ಒಂದು ವರ್ಷಗಳ ಕಾಲ ಮೈದಾನದಿಂದ ಹೊರಗುಳಿಯುವ ಸಾಧ್ಯತೆಯಿದೆ.

TV9 Web
| Edited By: |

Updated on: Feb 17, 2024 | 11:58 AM

Share
ಟಿ20 ವಿಶ್ವಕಪ್​ ಆರಂಭಕ್ಕೆ ತಿಂಗಳುಗಳು ಮಾತ್ರ ಉಳಿದಿರುವಾಗ ನ್ಯೂಝಿಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

1 / 5
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್​ ಕಬಳಿಸುವ ಮೂಲಕ ಕೈಲ್ ಜೇಮಿಸನ್ ಭರ್ಜರಿ ಪ್ರದರ್ಶನ ನೀಡಿದ್ದರು. ಆದರೆ ಆ ಪಂದ್ಯದ ಕೊನೆಯ ದಿನದಾಟದ ವೇಳೆ ಅವರು ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

2 / 5
ಇದೀಗ ವೈದ್ಯಕೀಯ ಪರೀಕ್ಷೆಗೆ ಒಳಗಾಗಿರುವ ಕೈಲ್ ಜೇಮಿಸನ್ ಅವರ ಬೆನ್ನು ನೋವಿನ ಸಮಸ್ಯೆಯು ಗಂಭೀರ ಎಂದು ತಿಳಿದು ಬಂದಿದೆ. ಸ್ಕ್ಯಾನಿಂಗ್ ವೇಳೆ ಅವರ ಬೆನ್ನಿನ ಮೂಳೆಯಲ್ಲಿ ಮುರಿತ ಕಂಡು ಬಂದಿದ್ದು, ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದಾರೆ. ಇನ್ನು ಸರ್ಜರಿ ಬಳಿಕ ಅವರು ಕನಿಷ್ಠ ಒಂದು ವರ್ಷದವರೆಗೆ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

3 / 5
ಏಕೆಂದರೆ ಕಳೆದ ವರ್ಷ ಕೂಡ ಇದೇ ಸಮಸ್ಯೆಯಿಂದಾಗಿ ಅವರು ಏಕದಿನ ವಿಶ್ವಕಪ್ ಹಾಗೂ ಹಲವು ಸರಣಿಗಳನ್ನು ತಪ್ಪಿಸಿಕೊಂಡಿದ್ದರು. ಇದೀಗ ಮತ್ತೆ ಬೆನ್ನು ನೋವಿನ ಸಮಸ್ಯೆ ಬಿಗಡಾಯಿಸಿದ್ದು, ಹೀಗಾಗಿ ಶಸ್ತ್ರಚಿಕಿತ್ಸೆಯ ಹೆಚ್ಚಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

4 / 5
ನ್ಯೂಝಿಲೆಂಡ್ ಪರ 13 ಟಿ20 ಪಂದ್ಯಗಳನ್ನಾಡಿರುವ ಕೈಲ್ ಜೇಮಿಸನ್ 10 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದರಲ್ಲೂ ಫಾಸ್ಟ್​ ಟ್ರ್ಯಾಕ್​ನಲ್ಲಿ ಜೇಮಿಸನ್ ಅತ್ಯುತ್ತಮ ದಾಳಿ ಸಂಘಟಿಸುವ ಸಾಮರ್ಥ್ಯ ಹೊಂದಿದ್ದರು. ಹೀಗಾಗಿ ವೆಸ್ಟ್ ಇಂಡೀಸ್-ಯುಎಸ್​ಎನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ಪಾಲಿಗೆ ಜೇಮಿಸನ್ ಟ್ರಂಪ್ ಕಾರ್ಡ್​ ಆಗಿದ್ದರು. ಆದರೀಗ ಕೈಲ್ ಜೇಮಿಸನ್ ಅವರ ಅಲಭ್ಯತೆಯು ಕಿವೀಸ್ ಪಡೆ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ