AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ

RCB vs CSK: ಐಪಿಎಲ್​ನ 11ನೇ ಪಂದ್ಯದ ವೇಳೆ ಆರ್​ಸಿಬಿ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಹೀಯಾಳಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್​ ಮ್ಯಾನೇಜ್ಮೆಂಟ್ ಬಿಸಿಸಿಐಗೆ ದೂರು ನೀಡಿದೆ. ಈ ದೂರಿನ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅಂಪೈರ್ ಫಿಕ್ಸಿಂಗ್ ಆರೋಪವೊಂದು ಮುನ್ನಲೆಗೆ ಬಂದಿದೆ.

ಝಾಹಿರ್ ಯೂಸುಫ್
|

Updated on: Apr 16, 2026 | 11:52 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧದ ಗಂಭೀರ ಆರೋಪವೊಂದು ಮತ್ತೆ ಮುನ್ನಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ.

1 / 6
ಪೋಡ್​​ಕಾಸ್ಟ್​ವೊಂದಲ್ಲಿ ಮಾತನಾಡಿದ ಲಲಿತ್ ಮೋದಿ, ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ಅವರು ಸಿಎಸ್​​ಕೆ ಪಂದ್ಯಗಳಿಗೆ ಚೆನ್ನೈ ಮೂಲದ ಅಂಪೈರ್​​ಗಳನ್ನು ನೇಮಿಸುತ್ತಿದ್ದರು. ಮೊದಲು ನಾನು ಈ ಬಗ್ಗೆ ಗಮನ ಹರಿಸಿರಲಿಲ್ಲ. ಆದರೆ ಸಿಎಸ್​​ಕೆ ಪಂದ್ಯಗಳಿಗೆಲ್ಲಾ ಚೈನ್ನೈನ ಅಂಪೈರ್​​​ಗಳೇ ಇರುತ್ತಿದ್ದರು. ಇದನ್ನು ಅಂಪೈರ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ.

2 / 6
ಸಿಎಸ್​​ಕೆ ಪರ ತೀರ್ಪು ಬರಲೆಂದು ತಮಗೆ ಬೇಕಾದ ಅಂಪೈರ್​​ಗಳನ್ನು ಅವರು ನೇಮಿಸುತ್ತಿದ್ದರು. ಈ ಮೂಲಕ ಫಿಕ್ಸಿಂಗ್ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂತು. ಈ ವಿಷಯವನ್ನು ಬಹಿರಂಗಪಡಿಸಲು ನಾನು ಪ್ರಯತ್ನಿಸಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ನನ್ನ ವಿರುದ್ಧ ತಿರುಗಿ ನಿಂತರು.

3 / 6
ಅಂದು ಎನ್ ಶ್ರೀನಿವಾಸನ್ ಅವರು ಬಿಸಿಸಿಐ ಕಾರ್ಯದರ್ಶಿ ಕೂಡ ಆಗಿದ್ದರು. ನಾನು ಸಿಎಸ್​​ಕೆ ಫ್ರಾಂಚೈಸಿಯ ಕಳ್ಳಾಟವನ್ನು ಬೆಳಕಿಗೆ ತಂದಿದ್ದರಿಂದ ಅವರು ನನ್ನ ಕಡು ವಿರೋಧಿಯಾದರು. ಹೀಗಾಗಿ ನನ್ನ ವಿರುದ್ಧ ಭ್ರಷ್ಟಚಾರದ ಅರೋಪಳನ್ನು ಹೊರಿಸಿದರು. ಈಗಲೂ ಖಚಿತವಾಗಿ ಹೇಳಬಲ್ಲೆ ಚೆನ್ನೈ ಸೂಪರ್ ಕಿಂಗ್ಸ್ ಅಂಪೈರ್​ಗಳನ್ನೇ ಫಿಕ್ಸ್ ಮಾಡಿಕೊಳ್ಳುತ್ತಿದ್ದದ್ದು ನಿಜ ಎಂದು ಲಲಿತ್ ಮೋದಿ ಆರೋಪಿಸಿದ್ದಾರೆ.

4 / 6
ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​​ನ ಮಾಜಿ ಅಧ್ಯಕ್ಷರ ಆರೋಪವು ಭಾರೀ ಚರ್ಚೆಗೆ ಕಾರಣವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ಚಾಂಪಿಯನ್ ಪಟ್ಟದ ಮೇಲೆಯೇ ಪ್ರಶ್ನೆಗಳೆದ್ದಿವೆ. ಏಕೆಂದರೆ ಸಿಎಸ್​​​ಕೆ ಫ್ರಾಂಚೈಸಿ ಈ ಹಿಂದೆ 2 ವರ್ಷಗಳ ಕಾಲ ನಿಷೇಧಕ್ಕೊಳಗಾಗಿತ್ತು.

5 / 6
ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣಗಳ ಕಾರಣದಿಂದಾಗಿ 2016 ಮತ್ತು 2017 ರ ಐಪಿಎಲ್​​ನಿಂದ ಸಿಎಸ್​​ಕೆ ಫ್ರಾಂಚೈಸಿಯನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮೇಲೆ ಅಂಪೈರ್ ಫಿಕ್ಸಿಂಗ್ ಆರೋಪ ಕೇಳಿ ಬಂದಿದ್ದು, ಈ ಗಂಭೀರ ಆರೋಪದ ಬಗ್ಗೆ ಸಿಎಸ್​​ಕೆ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

6 / 6
Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು