AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Laura Wolvaardt: ಕೈ ಕೊಟ್ಟ ವಿಶ್ವಕಪ್​ನಲ್ಲೂ ಕೈ ಹಿಡಿದ ವಿಶ್ವ ದಾಖಲೆ

India Women vs South Africa Women, Final: ಮಹಿಳಾ ಏಕದಿನ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್​ಗಳಲ್ಲಿ 246 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್​ಗಳ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Nov 03, 2025 | 9:53 AM

Share
ಮಹಿಳಾ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಸೋಲನುಭವಿಸಿದೆ. ನವಿ ಮುಂಬೈನ ಡಿವೈ ಪಾಟೀಲ್​ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಸೋಲಿನ ನಡುವೆ ಸೌತ್ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಡ್ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.

1 / 5
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 299 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಲಾರಾ ವೋಲ್ವಾರ್ಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭಿಕಳಾಗಿ ಕಣಕ್ಕಿಳಿದ ಲಾರಾ 98 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು.

2 / 5
ಈ 101 ರನ್​ಗಳೊಂದಿಗೆ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಲಾರಾ ವೋಲ್ವಾರ್ಡ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ವರ್ಲ್ಡ್​ ರೆಕಾರ್ಡ್ ಆಸ್ಟ್ರೇಲಿಯಾ ಆಟಗಾರ್ತಿ ಅಲಿಸ್ಸಾ ಹೀಲಿ ಹೆಸರಿನಲ್ಲಿತ್ತು.

3 / 5
2022ರಲ್ಲಿ ನ್ಯೂಝಿಲೆಂಡ್​ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಅಲಿಸ್ಸಾ ಹೀಲಿ ಬರೋಬ್ಬರಿ 509 ರನ್ ಬಾರಿಸಿದ್ದರು. ಈ ಮೂಲಕ ಮಹಿಳಾ ವಿಶ್ವಕಪ್ ಆವೃತ್ತಿಯಲ್ಲಿ 500+ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಬರೆದಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಲಾರಾ ವೋಲ್ವಾರ್ಡ್ ಯಶಸ್ವಿಯಾಗಿದ್ದಾರೆ. ಈ ಬಾರಿಯ ವಿಶ್ವಕಪ್​ನಲ್ಲಿ 9 ಇನಿಂಗ್ಸ್ ಆಡಿರುವ ಲಾರಾ 2 ಭರ್ಜರಿ ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 571 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್

ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು

ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?

ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ