BBL 2024: 7 ಭರ್ಜರಿ ಸಿಕ್ಸ್, 7 ಫೋರ್​: ಸಿಡಿಲಬ್ಬರದೊಂದಿಗೆ ದಾಖಲೆ ಬರೆದ ಇವಾನ್ಸ್

| Updated By: ಝಾಹಿರ್ ಯೂಸುಫ್

Updated on: Jan 04, 2024 | 9:57 AM

Laurie Evans: ಮೊದಲು ಬ್ಯಾಟ್ ಮಾಡಿದ ಪರ್ತ್​ ಸ್ಕಾಚರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಝಾಕ್ ಕ್ರಾಲಿ (10), ವೈಟ್​ಮ್ಯಾನ್ (31) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ನಾಯಕ ಆರೋನ್ ಹಾರ್ಡಿ 34 ರನ್​ಗಳ ಕೊಡುಗೆ ನೀಡಿ ಔಟಾದರು.

1 / 5
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಲಾರಿ ಇವಾನ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಪರ್ತ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಡಿಲೇಡ್ ಸ್ಟ್ರೈಕರ್ಸ್ ತಂಡವು ಮೊದಲು ಬೌಲಿಂಗ್ ಮಾಡಿತು.

2 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಪರ್ತ್​ ಸ್ಕಾಚರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಝಾಕ್ ಕ್ರಾಲಿ (10), ವೈಟ್​ಮ್ಯಾನ್ (31) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ನಾಯಕ ಆರೋನ್ ಹಾರ್ಡಿ 34 ರನ್​ಗಳ ಕೊಡುಗೆ ನೀಡಿ ಔಟಾದರು.

3 / 5
ಈ ಹಂತದಲ್ಲಿ ಕಣಕ್ಕಿಳಿದ ಲಾರಿ ಇವಾನ್ಸ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ ಇವಾನ್ಸ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಪರ್ತ್​ ಸ್ಕಾಚರ್ಸ್​ ಪರ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು.

4 / 5
ಇನ್ನು ಹಾಫ್ ಸೆಂಚುರಿ ಬಳಿಕ ತೂಫಾನ್ ಬ್ಯಾಟಿಂಗ್ ಮುಂದುವರೆಸಿದ ಇವಾನ್ಸ್ ಕೇವಲ 28 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 85 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಪರ್ತ್​ ಸ್ಕಾಚರ್ಸ್​ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು.

5 / 5
212 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಅಡಿಲೇಡ್ ಸ್ಟ್ರೈಕರ್ಸ್​ ತಂಡದ ಪರ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ 44 ಎಸೆತಗಳಲ್ಲಿ 77 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಅಂತಿಮವಾಗಿ 19.2 ಓವರ್​ಗಳಲ್ಲಿ 169 ರನ್​ಗಳಿಗೆ ಆಲೌಟ್ ಆಗುವ ಮೂಲಕ ಅಡಿಲೇಡ್ ಸ್ಟ್ರೈಕರ್ಸ್ ತಂಡ 42 ರನ್​ಗಳಿಂದ ಸೋಲೊಪ್ಪಿಕೊಂಡಿದೆ.