Test Records: ಟೆಸ್ಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಎಡಗೈ ಸ್ಪಿನ್ನರ್ ಯಾರು ಗೊತ್ತಾ?

| Updated By: ಝಾಹಿರ್ ಯೂಸುಫ್

Updated on: Jun 10, 2023 | 5:13 PM

Test Cricket Records: ಅಲ್ಲದೆ ಅತೀ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಎಡಗೈ ಸ್ಪಿನ್ನರ್​ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಎಡಗೈ ಸ್ಪಿನ್ನರ್​ಗಳ ಪಟ್ಟಿ ಈ ಕೆಳಗಿನಂತಿದೆ.

1 / 8
WTC Final 2023: ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ 3 ವಿಕೆಟ್ ಪಡೆಯುವುದರೊಂದಿಗೆ ರವೀಂದ್ರ ಜಡೇಜಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ಅವರ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 8
ಆಸ್ಟ್ರೇಲಿಯಾ ವಿರುದ್ಧ 3 ವಿಕೆಟ್ ಕಬಳಿಸುವುದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತದ ಎಡಗೈ ಸ್ಪಿನ್ನರ್ ಎಂಬ ದಾಖಲೆ ಜಡೇಜಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ 266 ವಿಕೆಟ್ ಪಡೆದಿದ್ದ ಬಿಷನ್ ಸಿಂಗ್ ಬೇಡಿ ಅವರ ಹೆಸರಿನಲ್ಲಿತ್ತು.

3 / 8
ಇದೀಗ 267* ವಿಕೆಟ್ ಉರುಳಿಸಿ ರವೀಂದ್ರ ಜಡೇಜಾ ಅಗ್ರಸ್ಥಾನಕ್ಕೇರಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಎಡಗೈ ಸ್ಪಿನ್ನರ್​ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಹಾಗಿದ್ರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಎಡಗೈ ಸ್ಪಿನ್ನರ್​ಗಳು ಯಾರೆಲ್ಲಾ ಎಂದು ನೋಡೋಣ...

4 / 8
1- ರಂಗನ ಹೆರಾತ್: ಶ್ರೀಲಂಕಾದ ರಂಗನ ಹೆರಾತ್ 170 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 433 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಎಡಗೈ ಸ್ಪಿನ್ನರ್ ಎನಿಸಿಕೊಂಡಿದ್ದಾರೆ.

5 / 8
2- ಡೇನಿಯಲ್ ವೆಟ್ಟೋರಿ: ನ್ಯೂಜಿಲೆಂಡ್​ನ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ 187 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 362 ವಿಕೆಟ್​ಗಳನ್ನು ಕಬಳಿಸಿದ್ದಾರೆ.

6 / 8
3- ಡೆರೆಕ್ ಅಂಡರ್​ವುಡ್: ಇಂಗ್ಲೆಂಡ್​ನ ಮಾಜಿ ಸ್ಪಿನ್ನರ್ ಡೆರೆಕ್ ಅಂಡರ್​ವುಡ್ 151 ಇನಿಂಗ್ಸ್​ಗಳಲ್ಲಿ 297 ವಿಕೆಟ್​ಗಳನ್ನು ಪಡೆದಿದ್ದಾರೆ.

7 / 8
4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 124 ಇನಿಂಗ್ಸ್​ಗಳಲ್ಲಿ ಒಟ್ಟು 267* ವಿಕೆಟ್​ಗಳನ್ನು ಕಬಳಿಸಿದ್ದಾರೆ.

8 / 8
5- ಬಿಷನ್ ಸಿಂಗ್ ಬೇಡಿ: ಭಾರತ ತಂಡದ ಮಾಜಿ ಆಟಗಾರ ಬಿಷನ್ ಸಿಂಗ್ ಬೇಡಿ 118 ಟೆಸ್ಟ್ ಇನಿಂಗ್ಸ್​ಗಳಲ್ಲಿ 266 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಎಡಗೈ ಸ್ಪಿನ್ನರ್​ಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.

Published On - 5:08 pm, Sat, 10 June 23