AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿವಿಂಗ್​ಸ್ಟೋನ್ ಜಬರ್​ದಸ್ತ್ ಸೆಂಚುರಿ: ಇಂಗ್ಲೆಂಡ್​ ದಾಖಲೆಯ ಚೇಸಿಂಗ್

West Indies vs England, 2nd ODI: ಇಂಗ್ಲೆಂಡ್-ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಆಂಗ್ಲರು ಭರ್ಜರಿ ಜಯ ಸಾಧಿಸಿದ್ದಾರೆ. ಇದಕ್ಕೂ ಮುನ್ನ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ವೆಸ್ಟ್ ಇಂಡೀಸ್ 8 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಇದೀಗ ಸರಣಿಯು 1-1 ಅಂತರದಿಂದ ಸಮಬಲಗೊಂಡಿದ್ದು, ಮೂರನೇ ಪಂದ್ಯವು ಫೈನಲ್​ ಫೈಟ್ ಆಗಿ ಮಾರ್ಪಟ್ಟಿದೆ.

ಝಾಹಿರ್ ಯೂಸುಫ್
|

Updated on: Nov 03, 2024 | 9:53 AM

Share
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಲಿಯಾಮ್ ಲಿವಿಂಗ್​ಸ್ಟೋನ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಇಂಗ್ಲೆಂಡ್ ತಂಡವು ವಿಂಡೀಸ್ ನೀಡಿದ ಬೃಹತ್ ಮೊತ್ತವನ್ನು ಚೇಸ್ ಮಾಡಿ ಅಮೋಘ ಗೆಲುವು ದಾಖಲಿಸಿರುವುದು ವಿಶೇಷ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತ್ತು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ನಾಯಕ ಶಾಯ್ ಹೋಪ್ 127 ಎಸೆತಗಳಲ್ಲಿ 4 ಸಿಕ್ಸ್, 8 ಫೋರ್​ಗಳೊಂದಿಗೆ 117 ರನ್ ಬಾರಿಸಿದರು. ಈ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ತಂಡವು 6 ವಿಕೆಟ್ ಕಳೆದುಕೊಂಡು 328 ರನ್​ ಕಲೆಹಾಕಿತು.

2 / 5
329 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ (59) ಉತ್ತಮ ಆರಂಭ ಒದಗಿಸಿದ್ದರು. ಇನ್ನು 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಲಿಯಾಮ್ ಲಿವಿಂಗ್​ಸ್ಟೋನ್ ಸ್ಪೋಟಕ ಇನಿಂಗ್ಸ್ ಆಡಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಲಿವಿಂಗ್​ಸ್ಟೋನ್ ವಿಂಡೀಸ್ ಬೌಲರ್​ಗಳ ಬೆಂಡೆತ್ತಿದರು.

3 / 5
ಪರಿಣಾಮ ಲಿಯಾಮ್ ಲಿವಿಂಗ್​ಸ್ಟೋನ್ ಬ್ಯಾಟ್​ನಿಂದ ಕೇವಲ 77 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದ ಬಳಿಕವೂ ಅಬ್ಬರ ಮುಂದುವರೆಸಿದ ಲಿವಿಂಗ್​ಸ್ಟೋನ್ 85 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 124 ರನ್ ಬಾರಿಸಿದರು. ಈ ಭರ್ಜರಿ ಸೆಂಚುರಿಯೊಂದಿಗೆ ಇಂಗ್ಲೆಂಡ್ ತಂಡವು 47.3 ಓವರ್​ಗಳಲ್ಲಿ 329 ರನ್ ಬಾರಿಸಿ 5 ವಿಕೆಟ್​ಗಳ ಜಯ ಸಾಧಿಸಿದೆ.

4 / 5
ವಿಶೇಷ ಎಂದರೆ ಇದು ವೆಸ್ಟ್ ಇಂಡೀಸ್​ ವಿರುದ್ಧ ಇಂಗ್ಲೆಂಡ್ ತಂಡದ ಎರಡನೇ ಬೆಸ್ಟ್ ಚೇಸಿಂಗ್ ಆಗಿದೆ. ಇದಕ್ಕೂ ಮುನ್ನ 2019 ರಲ್ಲಿ 364 ರನ್​ಗಳ ಗುರಿ ಮುಟ್ಟುವ ಮೂಲಕ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿತ್ತು. ಇದೀಗ 329 ರನ್​ಗಳನ್ನು ಚೇಸ್ ಮಾಡಿ ಅಮೋಘ ಗೆಲುವು ದಾಖಲಿಸಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ

ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ

ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ

ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು

ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ

ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ

ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್