ಲಿವಿಂಗ್ಸ್ಟೋನ್ ಜಬರ್ದಸ್ತ್ ಸೆಂಚುರಿ: ಇಂಗ್ಲೆಂಡ್ ದಾಖಲೆಯ ಚೇಸಿಂಗ್
West Indies vs England, 2nd ODI: ಇಂಗ್ಲೆಂಡ್-ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಆಂಗ್ಲರು ಭರ್ಜರಿ ಜಯ ಸಾಧಿಸಿದ್ದಾರೆ. ಇದಕ್ಕೂ ಮುನ್ನ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ವೆಸ್ಟ್ ಇಂಡೀಸ್ 8 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಇದೀಗ ಸರಣಿಯು 1-1 ಅಂತರದಿಂದ ಸಮಬಲಗೊಂಡಿದ್ದು, ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.
1 / 5
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಲಿಯಾಮ್ ಲಿವಿಂಗ್ಸ್ಟೋನ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಇಂಗ್ಲೆಂಡ್ ತಂಡವು ವಿಂಡೀಸ್ ನೀಡಿದ ಬೃಹತ್ ಮೊತ್ತವನ್ನು ಚೇಸ್ ಮಾಡಿ ಅಮೋಘ ಗೆಲುವು ದಾಖಲಿಸಿರುವುದು ವಿಶೇಷ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತ್ತು.
2 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ನಾಯಕ ಶಾಯ್ ಹೋಪ್ 127 ಎಸೆತಗಳಲ್ಲಿ 4 ಸಿಕ್ಸ್, 8 ಫೋರ್ಗಳೊಂದಿಗೆ 117 ರನ್ ಬಾರಿಸಿದರು. ಈ ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ತಂಡವು 6 ವಿಕೆಟ್ ಕಳೆದುಕೊಂಡು 328 ರನ್ ಕಲೆಹಾಕಿತು.
3 / 5
329 ರನ್ಗಳ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ (59) ಉತ್ತಮ ಆರಂಭ ಒದಗಿಸಿದ್ದರು. ಇನ್ನು 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಲಿಯಾಮ್ ಲಿವಿಂಗ್ಸ್ಟೋನ್ ಸ್ಪೋಟಕ ಇನಿಂಗ್ಸ್ ಆಡಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಲಿವಿಂಗ್ಸ್ಟೋನ್ ವಿಂಡೀಸ್ ಬೌಲರ್ಗಳ ಬೆಂಡೆತ್ತಿದರು.
4 / 5
ಪರಿಣಾಮ ಲಿಯಾಮ್ ಲಿವಿಂಗ್ಸ್ಟೋನ್ ಬ್ಯಾಟ್ನಿಂದ ಕೇವಲ 77 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದ ಬಳಿಕವೂ ಅಬ್ಬರ ಮುಂದುವರೆಸಿದ ಲಿವಿಂಗ್ಸ್ಟೋನ್ 85 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 124 ರನ್ ಬಾರಿಸಿದರು. ಈ ಭರ್ಜರಿ ಸೆಂಚುರಿಯೊಂದಿಗೆ ಇಂಗ್ಲೆಂಡ್ ತಂಡವು 47.3 ಓವರ್ಗಳಲ್ಲಿ 329 ರನ್ ಬಾರಿಸಿ 5 ವಿಕೆಟ್ಗಳ ಜಯ ಸಾಧಿಸಿದೆ.
5 / 5
ವಿಶೇಷ ಎಂದರೆ ಇದು ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ತಂಡದ ಎರಡನೇ ಬೆಸ್ಟ್ ಚೇಸಿಂಗ್ ಆಗಿದೆ. ಇದಕ್ಕೂ ಮುನ್ನ 2019 ರಲ್ಲಿ 364 ರನ್ಗಳ ಗುರಿ ಮುಟ್ಟುವ ಮೂಲಕ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿತ್ತು. ಇದೀಗ 329 ರನ್ಗಳನ್ನು ಚೇಸ್ ಮಾಡಿ ಅಮೋಘ ಗೆಲುವು ದಾಖಲಿಸಿದೆ.