AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಎಸೆತಗಳಲ್ಲಿ 81 ರನ್ಸ್​: ಅನಗತ್ಯ ವಿಶ್ವ ದಾಖಲೆ ಬರೆದ ಲಿಯಾಮ್ ಮೆಕ್​ಕಾರ್ಥಿ

Ireland vs West Indies: ಐರ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 256 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 194 ರನ್​ಗಳಿಸಿ 62 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Jun 16, 2025 | 8:00 AM

Share
ಟಿ20 ಕ್ರಿಕೆಟ್​ನ ಪಾದಾರ್ಪಣೆ ಪಂದ್ಯದಲ್ಲೇ ಐರ್ಲೆಂಡ್​ ವೇಗಿ ಲಿಯಾಮ್ ಮೆಕ್​ಕಾರ್ಥಿ ವಿಶ್ವ ದಾಖಲೆ ಬರೆದಿದ್ದಾರೆ. ಆದರೆ ಇದು ಅನಗತ್ಯ ದಾಖಲೆ ಎಂಬುದು ವಿಶೇಷ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರುವ ಮೆಕ್​ಕಾರ್ಥಿ ಚೊಚ್ಚಲ ಪಂದ್ಯದಲ್ಲೇ ದುಬಾರಿ ಓವರ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ ನಾಲ್ಕು ಓವರ್​ಗಳನ್ನು ಎಸೆದಿದ್ದ ಲಿಯಾಮ್ ಮೆಕ್​ಕಾರ್ಥಿ 4 ಸಿಕ್ಸರ್ ಹಾಗೂ 11 ಫೋರ್​ಗಳನ್ನು ಚಚ್ಚಿಸಿಕೊಂಡಿದ್ದಾರೆ. ಅಲ್ಲದೆ 24 ಎಸೆತಗಳಲ್ಲಿ ಬರೋಬ್ಬರಿ 81 ರನ್ ನೀಡಿದರು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಚೊಚ್ಚಲ ಪಂದ್ಯದಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎಂಬ ಬೇಡದ ದಾಖಲೆಗೆ ಕೊರೊಳೊಡ್ಡಿದರು.

2 / 5
ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಇಂಗ್ಲೆಂಡ್​ನ ಮಾಜಿ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿತ್ತು. 2007 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ಟಿ20 ಪಂದ್ಯವಾಡಿದ್ದ ಅ್ಯಂಡರ್ಸನ್ 4 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 64 ರನ್​ಗಳು. ಈ ಮೂಲಕ ಮೊದಲ ಪಂದ್ಯದಲ್ಲೇ ದುಬಾರಿ ಓವರ್​ಗಳನ್ನು ಎಸೆದ ಅಪಕೀರ್ತಿಗೆ ಪಾತ್ರರಾಗಿದ್ದರು.

3 / 5
ಇದೀಗ ವೆಸ್ಟ್ ಇಂಡೀಸ್ ವಿರುದ್ಧ 4 ಓವರ್​ಗಳಲ್ಲಿ 81 ರನ್​ಗಳನ್ನು ಚಚ್ಚಿಸಿಕೊಳ್ಳುವ ಮೂಲಕ ಲಿಯಾಮ್ ಮೆಕ್​ಕಾರ್ಥಿ ಅ್ಯಂಡರ್ಸನ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಇದಾಗ್ಯೂ ಇದು ಟಿ20 ಕ್ರಿಕೆಟ್​ನ ಅತ್ಯಂತ ದುಬಾರಿ ಸ್ಪೆಲ್ ಅಲ್ಲ ಎಂಬುದು ವಿಶೇಷ. ಈ ಅನಗತ್ಯ ದಾಖಲೆ ಇರುವುದು ಮೂಸಾ ಜೋಬರ್ತೆ ಹೆಸರಿನಲ್ಲಿ.

4 / 5
2024 ರಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಗ್ಯಾಂಬಿಯಾದ ಮೂಸಾ ಜೋಬರ್ತೆ 4 ಓವರ್​ಗಳಲ್ಲಿ ಬರೋಬ್ಬರಿ 93 ರನ್​ ನೀಡಿದ್ದರು. ಇದು ಟಿ20 ಕ್ರಿಕೆಟ್ ಇತಿಹಾಸದ ಅತ್ಯಂತ ದುಬಾರಿ ಸ್ಪೆಲ್. ಇದೀಗ 4 ಓವರ್​ಗಳಲ್ಲಿ 81 ರನ್ ನೀಡಿರುವ ಲಿಯಾಮ್ ಮೆಕ್​ಕಾರ್ಥಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್