AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಎಸೆತಗಳಲ್ಲಿ 6 ಸಿಕ್ಸರ್..; ಟಿ20 ಕ್ರಿಕೆಟ್​ನಲ್ಲಿ ಸಿಕ್ಸರ್​ಗಳ ಮಳೆಗರೆದವರಿವರು; ಪಟ್ಟಿಯಲ್ಲಿ ಇಬ್ಬರು ಭಾರತೀಯರು

T20 Cricket: ಪ್ರಿಯಾಂಶ್ ಅವರಿಗಿಂತ ಮೊದಲು, ಯುವರಾಜ್ ಸಿಂಗ್ 2007 ರ ಟಿ20 ವಿಶ್ವಕಪ್‌ನಲ್ಲಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್​ನ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಟಿ20 ಮಾದರಿಯಲ್ಲಿ ಇದುವರೆಗೆ ಸತತ 6 ಎಸೆತಗಳಿಗೆ 6 ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್​ಗಳು ಯಾರು ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Sep 01, 2024 | 3:49 PM

Share
ದೆಹಲಿ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್‌ನಲ್ಲಿ ಸೌತ್ ಡೆಲ್ಲಿ ಸೂಪರ್‌ಸ್ಟಾರ್ಸ್ ಪರ ಆಡುತ್ತಿರುವ ಪ್ರಿಯಾಂಶ್ ಆರ್ಯ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ಸಂಚಲನ ಮೂಡಿಸಿದ್ದು, ಸತತ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

1 / 7
ಪ್ರಿಯಾಂಶ್ ಅವರಿಗಿಂತ ಮೊದಲು, ಯುವರಾಜ್ ಸಿಂಗ್ 2007 ರ ಟಿ20 ವಿಶ್ವಕಪ್‌ನಲ್ಲಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್​ನ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಟಿ20 ಮಾದರಿಯಲ್ಲಿ ಇದುವರೆಗೆ ಸತತ 6 ಎಸೆತಗಳಿಗೆ 6 ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್​ಗಳು ಯಾರು ಎಂಬುದನ್ನು ನೋಡುವುದಾದರೆ..

2 / 7
ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಯುವರಾಜ್ ಸಿಂಗ್ 2007ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್​ಗೆ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿ ಸಂಚಲನ ಮೂಡಿಸಿದ್ದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಯುವಿ ಪಾತ್ರರಾಗಿದ್ದಾರೆ.

3 / 7
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್​ಮನ್ ಕೀರಾನ್ ಪೊಲಾರ್ಡ್ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿ ಸಂಚಲನ ಮೂಡಿಸಿದ್ದರು. ಅಕಿಲಾ ಧನಂಜಯ್ ವಿರುದ್ಧ ಪೊಲಾರ್ಡ್ ಈ ಸಾಧನೆ ಮಾಡಿದ್ದರು. ಅಚ್ಚರಿಯ ವಿಷಯವೆಂದರೆ ಇದೇ ಪಂದ್ಯದಲ್ಲಿ ಧನಂಜಯ್ ಕೂಡ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದು, ಇದಾದ ಬೆನ್ನಲ್ಲೇ ಪೊಲಾರ್ಡ್ ಅವರ ವಿರುದ್ಧ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ್ದರು.

4 / 7
ನೇಪಾಳ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ದೀಪೇಂದ್ರ ಸಿಂಗ್ ಐರಿ, ಎಸಿಸಿ ಪುರುಷರ ಪ್ರೀಮಿಯರ್ ಕಪ್ ಪಂದ್ಯದಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದ್ದರು. ಅಲ್ ಎಮಿರೇಟ್ಸ್‌ನಲ್ಲಿ ಕತಾರ್‌ನ ವೇಗದ ಬೌಲರ್ ಕಮ್ರಾನ್ ಖಾನ್ ವಿರುದ್ಧ ದೀಪೇಂದ್ರ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಬಾರಿಸಿದ ಸಾಧನೆ ಮಾಡಿದ್ದರು. ಈ ಪಂದ್ಯದಲ್ಲಿ ದೀಪೇಂದ್ರ 21 ಎಸೆತಗಳಲ್ಲಿ 64 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದ್ದರು.

5 / 7
ಕಳೆದ ತಿಂಗಳ ಆಗಸ್ಟ್ 20 ರಂದು ಸಮೋವಾ ಬ್ಯಾಟ್ಸ್‌ಮನ್ ಡೇರಿಯಸ್ ವಿಸ್ಸರ್ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದ್ದರು. ಡೇರಿಯಸ್ ವಿಸ್ಸರ್ ಅಂತರಾಷ್ಟ್ರೀಯ ಟಿ20ಯಲ್ಲಿ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

6 / 7
ಇದೀಗ ಡೆಲ್ಲಿ ಪ್ರೀಮಿಯರ್ ಲೀಗ್​ನ ಮೊದಲ ಸೀಸನ್​ನಲ್ಲಿ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ಪರ ಆಡುತ್ತಿರುವ ಪ್ರಿಯಾಂಶ್ ಆರ್ಯ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದರು. ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಓವರ್‌ನ ಎಲ್ಲಾ 6 ಎಸೆತಗಳಲ್ಲಿ ಸಿಕ್ಸರ್ ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪ್ರಿಯಾಂಶ್ ಪಾತ್ರರಾಗಿದ್ದಾರೆ. ಇದಲ್ಲದೆ ಈ ಪಂದ್ಯದಲ್ಲಿ ಪ್ರಿಯಾಂಶ್ ಸ್ಫೋಟಕ ಶತಕ ಕೂಡ ಸಿಡಿಸಿದರು.

7 / 7
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?

ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!

ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!