6 ಎಸೆತಗಳಲ್ಲಿ 6 ಸಿಕ್ಸರ್..; ಟಿ20 ಕ್ರಿಕೆಟ್‌ನಲ್ಲಿ ಸಿಕ್ಸರ್ಗಳ ಮಳೆಗರೆದವರಿವರು; ಪಟ್ಟಿಯಲ್ಲಿ ಇಬ್ಬರು ಭಾರತೀಯರು
T20 Cricket: ಪ್ರಿಯಾಂಶ್ ಅವರಿಗಿಂತ ಮೊದಲು, ಯುವರಾಜ್ ಸಿಂಗ್ 2007 ರ ಟಿ20 ವಿಶ್ವಕಪ್‌ನಲ್ಲಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್‌ನ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಟಿ20 ಮಾದರಿಯಲ್ಲಿ ಇದುವರೆಗೆ ಸತತ 6 ಎಸೆತಗಳಿಗೆ 6 ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್ಗಳು ಯಾರು ಎಂಬುದನ್ನು ನೋಡುವುದಾದರೆ..
1 / 7
ದೆಹಲಿ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್‌ನಲ್ಲಿ ಸೌತ್ ಡೆಲ್ಲಿ ಸೂಪರ್‌ಸ್ಟಾರ್ಸ್ ಪರ ಆಡುತ್ತಿರುವ ಪ್ರಿಯಾಂಶ್ ಆರ್ಯ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ಸಂಚಲನ ಮೂಡಿಸಿದ್ದು, ಸತತ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
2 / 7
ಪ್ರಿಯಾಂಶ್ ಅವರಿಗಿಂತ ಮೊದಲು, ಯುವರಾಜ್ ಸಿಂಗ್ 2007 ರ ಟಿ20 ವಿಶ್ವಕಪ್‌ನಲ್ಲಿ ಸ್ಟುವರ್ಟ್ ಬ್ರಾಡ್ ಎಸೆದ ಓವರ್‌ನ 6 ಎಸೆತಗಳಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನು ಟಿ20 ಮಾದರಿಯಲ್ಲಿ ಇದುವರೆಗೆ ಸತತ 6 ಎಸೆತಗಳಿಗೆ 6 ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟರ್ಗಳು ಯಾರು ಎಂಬುದನ್ನು ನೋಡುವುದಾದರೆ..
3 / 7
ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಯುವರಾಜ್ ಸಿಂಗ್ 2007ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ಗೆ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿ ಸಂಚಲನ ಮೂಡಿಸಿದ್ದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಯುವಿ ಪಾತ್ರರಾಗಿದ್ದಾರೆ.
4 / 7
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಕೀರಾನ್ ಪೊಲಾರ್ಡ್ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿ ಸಂಚಲನ ಮೂಡಿಸಿದ್ದರು. ಅಕಿಲಾ ಧನಂಜಯ್ ವಿರುದ್ಧ ಪೊಲಾರ್ಡ್ ಈ ಸಾಧನೆ ಮಾಡಿದ್ದರು. ಅಚ್ಚರಿಯ ವಿಷಯವೆಂದರೆ ಇದೇ ಪಂದ್ಯದಲ್ಲಿ ಧನಂಜಯ್ ಕೂಡ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದು, ಇದಾದ ಬೆನ್ನಲ್ಲೇ ಪೊಲಾರ್ಡ್ ಅವರ ವಿರುದ್ಧ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ್ದರು.
5 / 7
ನೇಪಾಳ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ದೀಪೇಂದ್ರ ಸಿಂಗ್ ಐರಿ, ಎಸಿಸಿ ಪುರುಷರ ಪ್ರೀಮಿಯರ್ ಕಪ್ ಪಂದ್ಯದಲ್ಲಿ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದ್ದರು. ಅಲ್ ಎಮಿರೇಟ್ಸ್‌ನಲ್ಲಿ ಕತಾರ್‌ನ ವೇಗದ ಬೌಲರ್ ಕಮ್ರಾನ್ ಖಾನ್ ವಿರುದ್ಧ ದೀಪೇಂದ್ರ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಬಾರಿಸಿದ ಸಾಧನೆ ಮಾಡಿದ್ದರು. ಈ ಪಂದ್ಯದಲ್ಲಿ ದೀಪೇಂದ್ರ 21 ಎಸೆತಗಳಲ್ಲಿ 64 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು.
6 / 7
ಕಳೆದ ತಿಂಗಳ ಆಗಸ್ಟ್ 20 ರಂದು ಸಮೋವಾ ಬ್ಯಾಟ್ಸ್‌ಮನ್ ಡೇರಿಯಸ್ ವಿಸ್ಸರ್ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದ್ದರು. ಡೇರಿಯಸ್ ವಿಸ್ಸರ್ ಅಂತರಾಷ್ಟ್ರೀಯ ಟಿ20ಯಲ್ಲಿ ಈ ಸಾಧನೆ ಮಾಡಿದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
7 / 7
ಇದೀಗ ಡೆಲ್ಲಿ ಪ್ರೀಮಿಯರ್ ಲೀಗ್‌ನ ಮೊದಲ ಸೀಸನ್‌ನಲ್ಲಿ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ಪರ ಆಡುತ್ತಿರುವ ಪ್ರಿಯಾಂಶ್ ಆರ್ಯ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಬಾರಿಸಿದರು. ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಓವರ್‌ನ ಎಲ್ಲಾ 6 ಎಸೆತಗಳಲ್ಲಿ ಸಿಕ್ಸರ್ ಬಾರಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪ್ರಿಯಾಂಶ್ ಪಾತ್ರರಾಗಿದ್ದಾರೆ. ಇದಲ್ಲದೆ ಈ ಪಂದ್ಯದಲ್ಲಿ ಪ್ರಿಯಾಂಶ್ ಸ್ಫೋಟಕ ಶತಕ ಕೂಡ ಸಿಡಿಸಿದರು.