T20I Fastest Century: ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಬಾರಿಸಿದ ಟಾಪ್-5 ಬ್ಯಾಟರ್ಗಳ ಪಟ್ಟಿ ಇಲ್ಲಿದೆ
TV9 Web | Updated By: ಝಾಹಿರ್ ಯೂಸುಫ್
Updated on:
Feb 27, 2024 | 3:09 PM
Fastest T20 Centuries List: ಟಿ20 ಕ್ರಿಕೆಟ್ನಲ್ಲಿ 36 ಬಾಲ್ಗಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿರುವುದು ಕೇವಲ ಐವರು ಬ್ಯಾಟರ್ಗಳು ಮಾತ್ರ. ಈ ಟಾಪ್-5 ಬ್ಯಾಟರ್ಗಳಲ್ಲಿ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಕೂಡ ಒಬ್ಬರು. ಹಾಗಿದ್ರೆ ಟಿ20 ಇತಿಹಾಸದಲ್ಲೇ ಅತೀ ವೇಗದ ಶತಕ ಬಾರಿಸಿದ ಬ್ಯಾಟ್ಸ್ಮನ್ಗಳು ಯಾರೆಂದು ತಿಳಿಯೋಣ...
1 / 6
ಟಿ20 ಕ್ರಿಕೆಟ್ನ ಅತೀ ವೇಗದ ಶತಕದ ದಾಖಲೆ ಇದೀಗ ಜಾನ್ ನಿಕೋಲ್ ಲಾಫ್ಟಿ ಹೆಸರಿಗೆ ಸೇರ್ಪಡೆಯಾಗಿದೆ. ನೇಪಾಳ ವಿರುದ್ಧದ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ನಮೀಬಿಯಾ ಬ್ಯಾಟರ್ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 35 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಸೆಂಚುರಿ ಬಾರಿಸಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗಿದ್ರೆ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ಟಾಪ್-5 ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...
2 / 6
1- ಜಾನ್ ನಿಕೋಲ್ ಲಾಫ್ಟಿ: ಫೆಬ್ರವರಿ 27, 2024 ರಂದು ನೇಪಾಳ ವಿರುದ್ಧದ ಪಂದ್ಯದಲ್ಲಿ ನಮೀಬಿಯಾದ ಜಾನ್ ನಿಕೋಲ್ 8 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಕೇವಲ 33 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
3 / 6
2- ಕುಶಾಲ್ ಮಲ್ಲ: 2023ರ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ತಂಡದ ಎಡಗೈ ಬ್ಯಾಟರ್ ಕುಶಾಲ್ ಮಲ್ಲ ಸ್ಪೋಟಕ ಶತಕ ಸಿಡಿಸಿದ್ದರು. ಕೇವಲ 34 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಕುಶಾಲ್ ಮಲ್ಲ ದಾಖಲೆ ಬರೆದಿದ್ದರು.
4 / 6
3- ಡೇವಿಡ್ ಮಿಲ್ಲರ್: 2017 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
5 / 6
4- ರೋಹಿತ್ ಶರ್ಮಾ: 2017 ರಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಡೇವಿಡ್ ಮಿಲ್ಲರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು.
6 / 6
5- ಎಸ್ ವಿಕ್ರಮಶೇಖರ: 2019 ರಲ್ಲಿ ಜೆಕ್ ರಿಪಬ್ಲಿಕ್ ತಂಡದ ಆಟಗಾರ ಎಸ್ ವಿಕ್ರಮಶೇಖರ ಟರ್ಕಿ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಮೂಲಕ ಡೇವಿಡ್ ಮಿಲ್ಲರ್ ಹಾಗೂ ರೋಹಿತ್ ಶರ್ಮಾ ಬರೆದಿದ್ದ ದಾಖಲೆಯನ್ನು ಸರಿಗಟ್ಟಿದ್ದರು.