ಕಿಂಗ್ ಕೊಹ್ಲಿ ನಂ.1.. ಟಾಪ್ 3ರಲ್ಲಿ ಸೂರ್ಯ! ಈ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗರಿವರು
TV9 Web | Updated By: ಪೃಥ್ವಿಶಂಕರ
Updated on:
Nov 13, 2022 | 6:19 PM
T20 World Cup 2022: ಎರಡು ಟಿ20 ವಿಶ್ವಕಪ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಈ ವರ್ಷದ ವಿಶ್ವಕಪ್‌ಗೂ ಮೊದಲು ಕೊಹ್ಲಿ 2014 ರಲ್ಲಿ ಈ ಸಾಧನೆ ಮಾಡಿದ್ದರು.
1 / 6
2022 ರ ಟಿ20 ವಿಶ್ವಕಪ್ಗೆ ಅದ್ಧೂರಿ ತೆರೆಬಿದ್ದಿದೆ. ಎರಡನೇ ಬಾರಿಗೆ ಟಿ20 ಚಾಂಪಿಯನ್ ಆಗುವಲ್ಲಿ ಇಂಗ್ಲೆಂಡ್ ತಂಡ ಯಶಸ್ವಿಯಾಗಿದ. ಈ ವಿಶ್ವಕಪ್ನಂತೆ ಹಿಂದೆ ನಡೆದ ಯಾವ ಸೀಸನ್ಗಳು ಕೂಡ ಇಷ್ಟು ರೋಮಾಂಚನಕಾರಿ ಮತ್ತು ಅಚ್ಚರಿ ಮೂಡಿಸಿಲಿಲ್ಲ. ಈ ವಿಶ್ವಕಪ್‌ನಲ್ಲಿ ಒಂದರ ಹಿಂದೆ ಒಂದರಂತೆ ಅಚ್ಚರಿ ಫಲಿತಾಂಶಗಳು ಹೊರಬಿದ್ದವು. ಅಲ್ಲದೆ ಅಬ್ಬರದ ಬ್ಯಾಟಿಂಗ್ ಮೂಲಕ ಅನೇಕ ಕ್ರಿಕೆಟಿಗರು ರನ್ಗಳ ಮಳೆಯನ್ನೇ ಸುರಿಸಿದರು. ಈ ಬಾರಿಯ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟ್ಸ್‌ಮನ್‌ಗಳು ಯಾರು ಎಂಬುದರ ವಿವರ ಇಲ್ಲಿದೆ.
2 / 6
ಇದರಲ್ಲಿ ಭಾರತದ ವಿರಾಟ್ ಕೊಹ್ಲಿ ಹೆಸರು ನಂಬರ್ ಒನ್ ಸ್ಥಾನದಲ್ಲಿದೆ. ಟೀಂ ಇಂಡಿಯಾ ಸೆಮಿಫೈನಲ್ ತನಕ ಪ್ರಯಾಣಿಸಿದ್ದು, ಅದರಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ವಿಶ್ವಕಪ್‌ನ ಆರು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ 98.66 ಸರಾಸರಿಯಲ್ಲಿ 296 ರನ್ ಗಳಿಸಿದ್ದ ಕೊಹ್ಲಿ ಖಾತೆಯಲ್ಲಿ ನಾಲ್ಕು ಅರ್ಧಶತಕಗಳು ಸೇರಿವೆ. ಔಟಾಗದೆ 82 ರನ್ ಗಳಿಸಿದ್ದು ಕೊಹ್ಲಿ ಅವರ ಗರಿಷ್ಠ ಸ್ಕೋರ್. ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಈ ಇನ್ನಿಂಗ್ಸ್ ಆಡಿದ ಅವರು ಪಾಕಿಸ್ತಾನದ ಕೈಯಿಂದ ಗೆಲುವನ್ನು ಕಸಿದುಕೊಂಡಿದ್ದರು. ಇದರೊಂದಿಗೆ ಎರಡು ಟಿ20 ವಿಶ್ವಕಪ್‌ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಈ ವರ್ಷದ ವಿಶ್ವಕಪ್‌ಗೂ ಮೊದಲು ಕೊಹ್ಲಿ 2014 ರಲ್ಲಿ ಈ ಸಾಧನೆ ಮಾಡಿದ್ದರು.
3 / 6
ಕೊಹ್ಲಿ ನಂತರ ನೆದರ್ಲೆಂಡ್ಸ್‌ನ ಮ್ಯಾಕ್ಸ್ ಒ'ಡೌಡ್ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಅವರು ಎಂಟು ಇನ್ನಿಂಗ್ಸ್‌ಗಳಲ್ಲಿ 34.57 ಸರಾಸರಿಯಲ್ಲಿ 242 ರನ್ ಗಳಿಸಿದರು. ನೆದರ್ಲೆಂಡ್ಸ್ ತಂಡ ಕ್ವಾಲಿಫೈಯರ್ ಸುತ್ತಿನಲ್ಲಿ ಆಡಿದ್ದರಿಂದ ಡೌಡ್ ಇತರರಿಗಿಂತ ಹೆಚ್ಚಿನ ಪಂದ್ಯಗಳನ್ನು ಆಡುವ ಮೂಲಕ ಈ ದಾಖಲೆ ಬರೆದಿದ್ದಾರೆ. ಈ ಟೂರ್ನಿಯಲ್ಲಿ ಮ್ಯಾಕ್ಸ್ ಎರಡು ಅರ್ಧಶತಕಗಳನ್ನು ಬಾರಿಸಿದ್ದು, ಅವರ ಅತ್ಯುತ್ತಮ ಸ್ಕೋರ್ ಔಟಾಗದೆ 71 ರನ್ ಆಗಿದೆ.
4 / 6
ಅವರ ನಂತರ ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ. ಸೂರ್ಯಕುಮಾರ್ ಆರು ಇನ್ನಿಂಗ್ಸ್‌ಗಳಲ್ಲಿ 59.75 ಸರಾಸರಿಯಲ್ಲಿ 239 ರನ್ ಗಳಿಸಿದರು. ಸೂರ್ಯಕುಮಾರ್ ಮೂರು ಅರ್ಧಶತಕಗಳನ್ನು ಬಾರಿಸಿದ್ದು, ಅವರ ಅತ್ಯುತ್ತಮ ಸ್ಕೋರ್ 68.
5 / 6
ಸೂರ್ಯಕುಮಾರ್ ನಂತರ ಕುಸಾಲ್ ಮೆಂಡಿಸ್ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಎಂಟು ಪಂದ್ಯಗಳಲ್ಲಿ ಮೆಂಡಿಸ್ 223 ರನ್ ಗಳಿಸಿದ್ದರು. 31.85 ಸರಾಸರಿಯಲ್ಲಿ ರನ್ ಗಳಿಸಿದ ಮೆಂಡಿಸ್ ಈ ವಿಶ್ವಕಪ್‌ನಲ್ಲಿ ಎರಡು ಅರ್ಧಶತಕಗಳನ್ನು ಬಾರಿಸಿದ್ದರು.
6 / 6
ಜಿಂಬಾಬ್ವೆಯ ಸಿಕಂದರ್ ರಜಾ ಈ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ. ಅವರು ಎಂಟು ಪಂದ್ಯಗಳಲ್ಲಿ 219 ರನ್ ಗಳಿಸಿದ್ದಾರೆ. ರಜಾ 27.37 ಸರಾಸರಿಯಲ್ಲಿ ರನ್ ಗಳಿಸಿದ್ದು, ಅವರ ಗರಿಷ್ಠ ಸ್ಕೋರ್ 82 ಆಗಿತ್ತು. ಹಾಗೆಯೇ ರಜಾ ಈ ವಿಶ್ವಕಪ್‌ನಲ್ಲಿ ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ.