2022 ರ ಡಿಸೆಂಬರ್ 30 ರಂದು, ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದರು. ಪಂತ್, ದೆಹಲಿಯಿಂದ ಉತ್ತರಾಖಂಡದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ವೇಳೆ ನಡೆದ ಈ ಅವಘಡದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಸುಮಾರು 14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಪಂತ್, ಆ ನಂತರ ಚೇತರಿಸಿಕೊಂಡು ಇದೀಗ ಮತ್ತೊಮ್ಮೆ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.