AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಸ್ ಲಿಟ್ಟನ್ ದಾಸ್… ಬಾಂಗ್ಲಾ ಪರ ಹೊಸ ಇತಿಹಾಸ

Bangladesh vs Netherlands: ಬಾಂಗ್ಲಾದೇಶ್ ಹಾಗೂ ನೆದರ್​ಲೆಂಡ್ಸ್ ನಡುವಣ ಮೂರನೇ ಟಿ20 ಪಂದ್ಯವು ಮಳೆಗೆ ಆಹುತಿಯಾಗಿದೆ. ಸಿಲ್ಹೆಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು 18.2 ಓವರ್​ಗಳ ಬ್ಯಾಟಿಂಗ್ ಮಾಡಿತ್ತು. ಆದರೆ ಆ ಬಳಿಕ ಸುರಿದ ಧಾರಾಕಾರ ಮಳೆಯಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಈ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಲಿಟ್ಟನ್ ದಾಸ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 04, 2025 | 7:55 AM

Share
ನೆದರ್​ಲೆಂಡ್ಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡದ ನಾಯಕ ಲಿಟ್ಟನ್ ದಾಸ್ (Litton das) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಸಿಲ್ಹೆಟ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್​ಲೆಂಡ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಪರ ಲಿಟ್ಟನ್ ದಾಸ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ದಾಸ್ ನೆದರ್​ಲೆಂಡ್ಸ್ ಬೌಲರ್​ಗಳ ಬೆಂಡೆತ್ತಲಾರಂಭಿಸಿದರು. ಪರಿಣಾಮ 27 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

2 / 5
ಈ ಅರ್ಧಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ ಲಿಟ್ಟನ್ ದಾಸ್ 46 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 6 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ 73 ರನ್​ಗಳೊಂದಿಗೆ ಲಿಟ್ಟನ್ ದಾಸ್ ಬಾಂಗ್ಲಾದೇಶ್ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 50+ ಸ್ಕೋರ್​ಗಳಿಸುವ ವಿಷಯದಲ್ಲಿ ಅಗ್ರಸ್ಥಾನಕ್ಕೇರುವ ಮೂಲಕ ಎಂಬುದು ವಿಶೇಷ.

3 / 5
ಬಾಂಗ್ಲಾದೇಶ್ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ದಾಖಲೆ ಶಕೀಬ್ ಅಲ್ ಹಸನ್ ಹೆಸರಿನಲ್ಲಿತ್ತು. ಬಾಂಗ್ಲಾ ಪರ 127 ಟಿ20 ಪಂದ್ಯಗಳನ್ನಾಡಿರುವ ಶಕೀಬ್ ಒಟ್ಟು 13 ಬಾರಿ 50+ ಸ್ಕೋರ್​ಗಳಿಸಿ ಈ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಲಿಟ್ಟನ್ ದಾಸ್ ಯಶಸ್ವಿಯಾಗಿದ್ದಾರೆ. ಬಾಂಗ್ಳಾದೇಶ್ ಪರ ಈವರೆಗೆ 108 ಪಂದ್ಯಗಳನ್ನಾಡಿರುವ ದಾಸ್ 14 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಐವತ್ತಕ್ಕಿಂತ ಹೆಚ್ಚು ರನ್​ಗಳಿಸಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!