IPL 2024: ಇಂದು RCB vs PBKS ಪಂದ್ಯ: ಫಾಫ್ ಪಡೆಯಲ್ಲಿ 2 ಬದಲಾವಣೆ ಖಚಿತ, ಪ್ಲೇಯಿಂಗ್ XI ನೋಡಿ
RCB Playing XI vs PBKS, IPL 2024: ಆರ್‌ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಆರು ವಿಕೆಟ್‌ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯ ಸಾಧಿಸಿತು. ಇದೀಗ ಇಂದು ಐಪಿಎಲ್ 2024 ರಲ್ಲಿ ಈ ಎರಡು ತಂಡಗಳು ಮುಖಾಮುಖಿ ಆಗಲಿದೆ. ಇಲ್ಲಿದೆ ನೋಡಿ ಪಂಜಾಬ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.
1 / 6
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕಿಕ್ ಹೆಚ್ಚಿಸುತ್ತಿದೆ. ಎರಡು ಡಬಲ್ ಹೆಡರ್ಗಳ ಬಳಿಕ ಇಂದು ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2024 ರ ಆರನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಅವರ ಆರ್‌ಸಿಬಿ ತಂಡ ಶಿಖರ್ ಧವನ್ ಅವರ ಪಂಜಾಬ್ ಕಿಂಗ್ಸ್ಗೆ ಅನ್ನು ಆತಿಥ್ಯ ವಹಿಸಲಿದೆ.
2 / 6
ಆರ್‌ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ವಿಕೆಟ್‌ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯ ಸಾಧಿಸಿತು. ಸದ್ಯ ಪಾಯಿಂಟ್ಸ್ ಟೇಬಲ್ನಲ್ಲಿ ಬೆಂಗಳೂರು 9ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಮೂರನೇ ಸ್ಥಾನದಲ್ಲಿದೆ.
3 / 6
ಸಿಎಸ್‌ಕೆ ವಿರುದ್ಧ ಚೆನ್ನೈನಲ್ಲಿ ಆರ್‌ಸಿಬಿ ನೀಡಿದ ಪ್ರದರ್ಶನ ಬೌಲಿಂಗ್ನಲ್ಲಿ ತೀರಾ ಕಳಪೆಯಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡುವುದು ಖಚಿತ. ಬೆಂಗಳೂರಿನಲ್ಲಿರುವ ಬ್ಯಾಟಿಂಗ್ ಸ್ನೇಹಿ ಪಿಚ್‌ಗಳ ಸ್ವರೂಪವನ್ನು ಗಮನಿಸಿದರೆ, ಆರ್‌ಸಿಬಿ ತಂಡಕ್ಕೆ ಬಲಿಷ್ಠ ಅನುಭವಿ ಬೌಲರ್ ಬೇಕೇಬೇಕು.
4 / 6
ಚೆನ್ನೈನಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೀಮರ್ ಅಲ್ಜಾರಿ ಜೋಸೆಫ್ 3.4 ಓವರ್‌ಗಳಲ್ಲಿ 38 ರನ್ ನೀಡಿ ದುಬಾರಿಯಾದರು. ಜೋಸೆಫ್‌ರ ನೀರಸ ಪ್ರದರ್ಶನದಿಂದ ಇವರು ಪ್ಲೇಯಿಂಗ್ XI ನಿಂದ ಔಟ್ ಆಗುವ ಸಾಧ್ಯತೆ ಇದೆ. ಇವರ ಸ್ಥಾನಕ್ಕೆ ಸ್ಟಾರ್ ವೇಗಿ ಲಾಕಿ ಫರ್ಗುಸನ್ ಬರುವುದು ಬಹುತೇಕ ಖಚಿತ.
5 / 6
ಹಾಗೆಯೆ ಆರ್‌ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲೂ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದಲೂ ಕಳಪೆ ಫಾರ್ಮ್ನಿಂದ ಕಂಗೆಟ್ಟಿರುವ ರಜತ್ ಪಾಟಿದರ್ಗೆ ಇಂದು ಅವಕಾಶ ಸಿಗುವುದು ಅನುಮಾನ. ಇವರ ಜಾಗಕ್ಕೆ ಸುಯೇಶ್ ಪ್ರಭುದೇಸಾಯಿ ಅಥವಾ ಮಹಿಪಾಲ್ ಲುಮ್ರೂರ್ ಬರುವ ಸಾಧ್ಯತೆ ಇದೆ.
6 / 6
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ , ಸುಯೇಶ್ ಪ್ರಭುದೇಸಾಯಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.