Updated on: Jun 27, 2023 | 6:09 PM
ICC World Cup Qualifiers 2023: ಹರಾರೆಯಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ರಣರೋಚಕ ಪಂದ್ಯದಲ್ಲಿ ಸೂಪರ್ ಗೆಲುವು ದಾಖಲಿಸುವ ಮೂಲಕ ನೆದರ್ಲ್ಯಾಂಡ್ಸ್ ತಂಡವು ಹೊಸ ಇತಿಹಾಸ ನಿರ್ಮಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 50 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಕಲೆಹಾಕಿತು. ಈ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ನೆದರ್ಲ್ಯಾಂಡ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 374 ರನ್ಗಳಿಸುವ ಮೂಲಕ ಪಂದ್ಯವನ್ನು ಟೈ ಮಾಡಿಕೊಂಡಿತು.
ಉಭಯ ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯವು ಸೂಪರ್ ಓವರ್ನತ್ತ ಸಾಗಿತು. ಇತ್ತ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಚೆಂಡನ್ನು ಜೇಸನ್ ಹೋಲ್ಡರ್ ಕೈಗಿತ್ತರು.
ಹೋಲ್ಡರ್ ಅವರ ಮೊದಲ ಎಸೆತದಲ್ಲೇ ಫೋರ್ ಬಾರಿ ಲೋಗನ್ ವ್ಯಾನ್ ಬೀಕ್, 2ನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿದರು. ಇನ್ನು 3ನೇ ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದರು.
4ನೇ ಹಾಗೂ 5ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದರು. ಇನ್ನು ಕೊನೆಯ ಎಸೆತದಲ್ಲಿ ಫೋರ್ ಬಾರಿಸುವ ಮೂಲಕ ಒಂದೇ ಓವರ್ನಲ್ಲಿ ವ್ಯಾನ್ ಬೀಕ್ ಬರೋಬ್ಬರಿ 30 ರನ್ ಚಚ್ಚಿದರು.
31 ರನ್ಗಳ ಟಾರ್ಗೆಟ್ ಪಡೆದ ವೆಸ್ಟ್ ಇಂಡೀಸ್ ತಂಡವು 5 ಎಸೆತಗಳಲ್ಲಿ 8 ರನ್ಗಳಿಸಿ 2 ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ವಿಶೇಷ ಎಂದರೆ ಈ ಓವರ್ ಎಸೆದಿರುವುದು ಕೂಡ ವ್ಯಾನ್ ಬೀಕ್.
ಅಂದರೆ ವ್ಯಾನ್ ಬೀಕ್ ಸೂಪರ್ ಓವರ್ ಬ್ಯಾಟಿಂಗ್ನಲ್ಲಿ 30 ರನ್ ಬಾರಿಸಿ, ಬೌಲಿಂಗ್ನಲ್ಲಿ 2 ವಿಕೆಟ್ ಪಡೆದು ನೆದರ್ಲ್ಯಾಂಡ್ಸ್ ತಂಡಕ್ಕೆ ರೋಚಕ ಗೆಲುವು ತಂದು ಕೊಟ್ಟರು.
ಅಲ್ಲದೆ ಕ್ರಿಕೆಟ್ ಇತಿಹಾಸದಲ್ಲೇ ಸೂಪರ್ ಓವರ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ಲೋಗನ್ ವ್ಯಾನ್ ಬೀಕ್ ನಿರ್ಮಿಸಿದರು.
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಗೇಲ್ 2008 ರಲ್ಲಿ ಡೇನಿಯಲ್ ವೆಟ್ಟೋರಿ ಎಸೆದ ಸೂಪರ್ ಓವರ್ನಲ್ಲಿ 25 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.