- Kannada News Photo gallery Cricket photos London Weather Forecast for India vs Australia ICC World Test Championship Final
WTC Final 2023 Weather Report: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಮಳೆಯ ಕಾಟ?: ಹವಾಮಾನ ವರದಿ ಇಲ್ಲಿದೆ
IND vs AUS Final: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಜೂನ್ 7 ಬುಧವಾರದಿಂದ ಆರಂಭವಾಗಲಿದ್ದು, ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ. ಹಾಗಾದರೆ ಈ ಪಂದ್ಯಕ್ಕೆ ಮಳೆಯ ಕಾಟ ಇದೆಯೇ?, ಹವಾಮಾನ ವರದಿ ಇಲ್ಲಿದೆ.
Updated on: Jun 06, 2023 | 11:21 AM

ಸಾಕಷ್ಟು ರೋಚಕತೆ ಸೃಷ್ಟಿಸಿರುವ ಬಹುನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಜೂನ್ 7 ಬುಧವಾರದಿಂದ ಆರಂಭವಾಗಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಈ ಹೈವೋಲ್ಟೇಜ್ ಪಂದ್ಯದಲ್ಲಿ ಮುಖಾಮುಖಿ ಆಗಲಿದ್ದು ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ.

2021ರ ಜೂನ್‌ನಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು ಭಾರತ 8 ವಿಕೆಟ್‌ಗಳಿಂದ ಸೋಲುಂಡಿತ್ತು. ಇದೀಗ ಸತತ ಎರಡನೇ ಬಾರಿ ಫೈನಲ್ ತಲುಪಿರುವ ಟೀಮ್ ಇಂಡಿಯಾ ಚೊಚ್ಚಲ ಟ್ರೋಫಿ ಗೆಲ್ಲುತ್ತಾ ನೋಡಬೇಕಿದೆ.

ಲಂಡನ್ನ ಸದ್ಯದ ವಾತಾವರಣ ಹಾಗೂ ಹವಾಮಾನ ಮುನ್ಸೂಚನೆ ಪ್ರಕಾರ ಪಂದ್ಯಕ್ಕೆ ಮಳೆಯ ಭೀತಿ ಇಲ್ಲ. ತಾಪಮಾನ ಕನಿಷ್ಠ 15 ಡಿಗ್ರಿ ಸೆಲ್ಷಿಯಸ್‌ನಿಂದ ಗರಿಷ್ಠ 22ರಷ್ಟಿರಲಿದೆ. ಆದರೆ ಇಂಗ್ಲೆಂಡ್‌ನ ಹವಾಮಾನ ಬದಲಾಗುತ್ತಾ ಇರುತ್ತದೆ. ಯಾವಾಗ ಬೇಕಿದ್ದರೂ ಮಳೆ ಬೀಳಬಹುದು.

ಇಲ್ಲಿನ ಪಿಚ್ ಕೂಡ ಮಿಸ್ಟ್ರಿ ಎಂದು ಹೇಳಬಹುದು. ಯಾವ ರೀತಿ ವರ್ತಿಸುತ್ತದೆ ಎಂದು ಹೇಳುವುದು ಕಷ್ಟ. ಈ ಪಿಚ್ ಹಿಂದೆ ವೇಗಿಗಳಿಗೆ ಅನುಕೂಲಕರವಾಗಿದ್ದರೆ, ಕಳೆದ ಆರು ಪಂದ್ಯಗಳು ಇದಕ್ಕೆ ವಿರುದ್ಧವಾಗಿ ಕಂಡಿವೆ.

143 ವರ್ಷಗಳ ಇತಿಹಾಸ ಹೊಂದಿರುವ ಓವಲ್ ಗ್ರೌಂಡ್ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಯೋಜಿಸಿದ ದಾಖಲೆಯನ್ನು ಕೂಡ ಹೊಂದಿದೆ. ಪಂದ್ಯದ ಅಂತಿಮ ಎರಡು ದಿನಗಳಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿ ಆಗುತ್ತಾರೆ. ಹಸಿರು ಮೇಲ್ಮೈ ಕೊರತೆಯಿಂದಾಗಿ ಇಲ್ಲಿ ವೇಗದ ಬೌಲರ್‌ಗಳ ದಾಖಲೆಗಳು ಉತ್ತಮವಾಗಿಲ್ಲ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ಟೆಲಿವಿಷನ್ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ನೋಡಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕೆಎಸ್ ಭರತ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕಟ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಟಾಡ್ ಮರ್ಫಿ, ಮಿಚೆಲ್ ಸ್ಟಾರ್ಕ್ ಮತ್ತು ಮ್ಯಾಥ್ಯೂ ರೆನ್ಶಾ.
