
ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಾಕಿಸ್ತಾನದ ಯುವ ಬ್ಯಾಟರ್ ಮಾಝ್ ಸದಾಕತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಮೂರು ಭರ್ಜರಿ ದಾಖಲೆಗಳನ್ನು ಬರೆಯುವ ಮೂಲಕ. ಈ ದಾಖಲೆಗಳೊಂದಿಗೆ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: PSL)
ಬಾರ್ಬಡೋಸ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಕೆರಿಬಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಜಮೈಕಾ ಕಿಂಗ್ಸ್ಮೆನ್ ಪರ ಕಣಕ್ಕಿಳಿದ ಮಾಝ್ ಸದಾಕತ್, ಅಂಟಿಗುವಾ ಆ್ಯಂಡ್ ಬಾರ್ಬುಡಾ ಫಾಲ್ಕನ್ಸ್ ವಿರುದ್ಧ 58 ಎಸೆತಗಳಲ್ಲಿ 9 ಭರ್ಜರಿ ಸಿಕ್ಸರ್ ಹಾಗೂ 8 ಫೋರ್ಗಳೊಂದಿಗೆ 114 ರನ್ ಚಚ್ಚಿದ್ದಾರೆ. (PC: PSL)
ಈ ಭರ್ಜರಿ ಶತಕದೊಂದಿಗೆ ಮಾಝ್ ಸದಾಕತ್ ಕೆರಿಬಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಫೈನಲ್ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಂದರೆ ಕಳೆದ 12 ಸೀಸನ್ಗಳಲ್ಲಿ ಯಾರಿಂದಲೂ ಸಾಧ್ಯವಾಗದ ಫೈನಲ್ ಸೆಂಚುರಿ ದಾಖಲೆಯನ್ನು ಮಾಝ್ ಸದಾಕತ್ ತಮ್ಮದಾಗಿಸಿಕೊಂಡಿದ್ದಾರೆ. (PC: PSL)
ಹಾಗೆಯೇ ಸಿಪಿಎಲ್ ಟೂರ್ನಿಯಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ಕೂಡ ಮಾಝ್ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಬಾರ್ಬಡೋಸ್ ಟ್ರೈಡೆಂಟ್ಸ್ ವಿರುದ್ಧ ಕೇವಲ 49 ಎಸೆತಗಳಲ್ಲಿ 112 ರನ್ ಗಳಿಸಿದ್ದ ಮಾಝ್ ಇದೀಗ ಮತ್ತೊಮ್ಮೆ ಶತಕ ಸಿಡಿಸಿದ್ದಾರೆ. ಈ ಮೂಲಕ 21ನೇ ವಯಸ್ಸಿನಲ್ಲಿ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಶತಕಗಳನ್ನು ಬಾರಿಸಿ ಹೊಸ ಇತಿಹಾಸ ಬರೆದಿದ್ದಾರೆ. (PC: PSL)
ಇದರ ಜೊತೆಗೆ ಕೆರಿಬಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಒಂದೇ ಆವೃತ್ತಿಯಲ್ಲಿ 2 ಶತಕ ಸಿಡಿಸಿದ ಮೊದಲ ವಿದೇಶಿ ದಾಂಡಿಗ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಬಾರ್ಬಡೋಸ್ ಟ್ರೈಡೆಂಟ್ಸ್ (112) ಹಾಗೂ ಅಂಟಿಗುವಾ ಆ್ಯಂಡ್ ಬಾರ್ಬುಡಾ ಫಾಲ್ಕನ್ಸ್ (114) ವಿರುದ್ಧ ಸೆಂಚುರಿ ಸಿಡಿಸಿ ಮಾಝ್ ಸದಾಕತ್ ಈ ವಿಶೇಷ ದಾಖಲೆ ಬರೆದಿದ್ದಾರೆ. (PC: PSL)
Published On - 10:18 am, Mon, 21 September 26