9 ಭರ್ಜರಿ ಸಿಕ್ಸ್, 13 ಫೋರ್: ದಾಖಲೆಯ ಸೆಂಚುರಿ ಸಿಡಿಸಿದ ಕರುಣ್ ನಾಯರ್

|

Updated on: Aug 20, 2024 | 7:32 AM

Maharaja Trophy 2024: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೈಸೂರು ವಾರಿಯರ್ಸ್ ತಂಡವು ಕರುಣ್ ನಾಯರ್ ಅವರ ಶತಕದ ನೆರವಿನಿಂದ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 226 ರನ್ ಕಲೆಹಾಕಿತು. ದ್ವಿತೀಯ ಇನಿಂಗ್ಸ್​ ವೇಳೆ ಮಳೆ ಬಂದಿದ್ದರಿಂದ ಮಂಗಳೂರು ಡ್ರಾಗನ್ಸ್ ತಂಡಕ್ಕೆ 14 ಓವರ್​ಗಳಲ್ಲಿ 166 ರನ್​ಗಳ ಗುರಿ ನೀಡಲಾಗಿತ್ತು. ಈ ಗುರಿಯನ್ನು ಬೆನತ್ತಿದ ಮಂಗಳೂರು ಡ್ರಾಗನ್ಸ್ ತಂಡವು 138 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಮೈಸೂರು ವಾರಿಯರ್ಸ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
ಮಹಾರಾಜ ಟ್ರೋಫಿ ಟಿ20 ಟೂರ್ನಿಯ 10ನೇ ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಕರುಣ್ ನಾಯರ್ ಹೊಸ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಡ್ರಾಗನ್ಸ್ ತಂಡವು ಮೈಸೂರು ವಾರಿಯರ್ಸ್ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

2 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಮೈಸೂರು ವಾರಿಯರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಓಪನರ್​ಗಳಾದ ಅಜಿತ್ ಕಾರ್ತಿಕ್ (11) ಹಾಗೂ ಎಸ್​ಯು ಕಾರ್ತಿಕ್ (23) ಬೇಗನೆ ವಿಕೆಟ್ ಒಪ್ಪಿಸಿದರು. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಕರುಣ್ ನಾಯರ್ ಭರ್ಜರಿ ಬ್ಯಾಟಿಂಗ್ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

3 / 5
ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ ಕರುಣ್ ನಾಯರ್ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇನ್ನು ಅರ್ಧಶತಕ ಬಳಿಕ ಆರ್ಭಟ ಮುಂದುವರೆಸಿದ ಕರುಣ್ ಮಂಗಳೂರು ಡ್ರಾಗನ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 43 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದೊಂದಿಗೆ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಕರುಣ್ ನಾಯರ್ ತಮ್ಮದಾಗಿಸಿಕೊಂಡರು.

4 / 5
ಇದಕ್ಕೂ ಮುನ್ನ ಈ ದಾಖಲೆ ರೋಹನ್ ಪಾಟೀಲ್ ಹೆಸರಿನಲ್ಲಿತ್ತು. 2022ರ ಮಹಾರಾಜ ಟ್ರೋಫಿಯಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ಪರ ಕಣಕ್ಕಿಳಿದಿದ್ದ ರೋಹನ್ ಕೇವಲ 47 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 112 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

5 / 5
ಇದೀಗ ಮಂಗಳೂರು ಡ್ರಾಗನ್ಸ್ ವಿರುದ್ಧದ ಪಂದ್ಯದಲ್ಲಿ 48 ಎಸೆತಗಳನ್ನು ಎದುರಿಸಿದ ಕರುಣ್ ನಾಯರ್ 9 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 124 ರನ್​ ಚಚ್ಚಿದ್ದಾರೆ. ಈ ಮೂಲಕ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಬ್ಯಾಟರ್​ ಎಂಬ ದಾಖಲೆಯನ್ನು ಕರುಣ್ ನಾಯರ್ ತಮ್ಮದಾಗಿಸಿಕೊಂಡಿದ್ದಾರೆ.