ಒಂದೇ ಪಂದ್ಯದಲ್ಲಿ 7 ವಿಕೆಟ್ ಉರುಳಿಸಿದ ಮಾನವ್ ಸುತಾರ್

Updated on: Sep 05, 2026 | 4:05 PM

ಮಾನವ್ ಸುತಾರ್ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ವಾರ್ವಿಕ್‌ಷೇರ್ ತಂಡ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಹ್ಯಾಂಪ್‌ಶೈರ್ ವಿರುದ್ಧ ಇನ್ನಿಂಗ್ಸ್ ಗೆಲುವು ಸಾಧಿಸಿದೆ. ಯುವ ಸ್ಪಿನ್ನರ್ ಸುತಾರ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 7 ವಿಕೆಟ್‌ಗಳನ್ನು ಕಬಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಗೆಲುವಿನೊಂದಿಗೆ ವಾರ್ವಿಕ್‌ಷೇರ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಅವರ ಪ್ರದರ್ಶನ ಇಂಗ್ಲೆಂಡ್‌ನಲ್ಲಿ ಗಮನ ಸೆಳೆದಿದೆ.

1 / 5
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ವಾರ್ವಿಕ್‌ಷೈರ್ ತಂಡದ ಪರ ಆಡುತ್ತಿರುವ ಟೀಂ ಇಂಡಿಯಾದ ಯುವ ಸ್ಪಿನ್ನರ್ ಮಾನವ್ ಸುತಾರ್ ಮತ್ತೊಮ್ಮೆ ತಮ್ಮ ಅದ್ಭುತ ಪ್ರದರ್ಶನದ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ಪಂದ್ಯದ ಎರಡೂ ಇನ್ನಿಂಗ್ಸ್​ಗಳಲ್ಲಿ ಮಾನವ್ 7 ವಿಕೆಟ್‌ಗಳನ್ನು ಕಬಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ (Warwickshire X).

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ವಾರ್ವಿಕ್‌ಷೈರ್ ತಂಡದ ಪರ ಆಡುತ್ತಿರುವ ಟೀಂ ಇಂಡಿಯಾದ ಯುವ ಸ್ಪಿನ್ನರ್ ಮಾನವ್ ಸುತಾರ್ ಮತ್ತೊಮ್ಮೆ ತಮ್ಮ ಅದ್ಭುತ ಪ್ರದರ್ಶನದ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ಪಂದ್ಯದ ಎರಡೂ ಇನ್ನಿಂಗ್ಸ್​ಗಳಲ್ಲಿ ಮಾನವ್ 7 ವಿಕೆಟ್‌ಗಳನ್ನು ಕಬಳಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ (Warwickshire X).

2 / 5

ಹ್ಯಾಂಪ್‌ಶೈರ್ ವಿರುದ್ಧದ ಪಂದ್ಯದಲ್ಲಿ ಕೇವಲ ಮೂರು ದಿನಗಳಲ್ಲಿ ಗೆದ್ದುಕೊಂಡಿರುವ ವಾರ್ವಿಕ್‌ಷೈರ್ ತಂಡಕ್ಕೆ ಇನ್ನಿಂಗ್ಸ್ ಮತ್ತು 129 ರನ್‌ಗಳ ಗೆಲುವು ದಾಖಲಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 115 ರನ್‌ಗಳಿಗೆ ಆಲೌಟ್ ಆಗಿದ್ದ ಹ್ಯಾಂಪ್‌ಶೈರ್ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 154 ರನ್‌ಗಳಿಗೆ ಆಲೌಟ್ ಆಯಿತು(Warwickshire X).

3 / 5

ವಾರ್ವಿಕ್‌ಷೈರ್ ತಂಡದ ಈ ಗೆಲುವಿನ ಪ್ರಮುಖ ಪಾತ್ರವಹಿಸಿದ ಮಾನವ್ ಸುತಾರ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ 7 ವಿಕೆಟ್‌ಗಳನ್ನು ಕಬಳಿಸಿದರು. ಈ ಗೆಲುವಿನೊಂದಿಗೆ ವಾರ್ವಿಕ್‌ಷೈರ್‌ಗೆ 22 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ(Warwickshire X).

4 / 5

ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಸ್ಪಿನ್ನರ್ ಮಾನವ್ ಸುತಾರ್ ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು. ನಂತರ ಎರಡನೇ ಇನ್ನಿಂಗ್ಸ್​ನಲ್ಲಿ ಪಿಚ್​ನ ಸಂಪೂರ್ಣ ಲಾಭವನ್ನು ಪಡೆದುಕೊಂಡು ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರು(Warwickshire X).

5 / 5

ಈ ಪಂದ್ಯದಲ್ಲಿ ಮಾನವ್ ಸುತಾರ್ ಅದ್ಭುತ ಬೌಲಿಂಗ್ ಮಾಡಿ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕರಾದ ನಿಕ್ ಗುಬ್ಬಿನ್ಸ್, ಎಡ್ಡಿ ಜ್ಯಾಕ್ ಮತ್ತು ಜೇಮ್ಸ್ ಫುಲ್ಲರ್ ಅವರನ್ನು ಔಟ್ ಮಾಡಿದರು. ಎರಡನೇ ಇನ್ನಿಂಗ್ಸ್‌ನಲ್ಲಿ, ಅವರು ಅಬಾಟ್ ಸೇರಿದಂತೆ ಟೋಬಿ ಆಲ್ಬರ್ಟ್, ಬೆನ್ ಮೇಯಸ್, ಫುಲ್ಲರ್ ಮತ್ತು ಕೈಲ್ ಅಬಾಟ್ ಅವರನ್ನು ಔಟ್ ಮಾಡಿ ಹ್ಯಾಂಪ್‌ಶೈರ್‌ನ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು(Warwickshire X).

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us