AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

W,W,W..ಆಂಗ್ಲರ ನೆಲದಲ್ಲೂ ಮಿಂಚಿದ ಮಾನವ್ ಸುತಾರ್

Manav Suthar's Brilliance: ಮಾನವ್ ಸುತಾರ್ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ನಲ್ಲಿ ಮಿಂಚಿದ ನಂತರ ಇಂಗ್ಲೆಂಡ್ ಕೌಂಟಿ ಕ್ರಿಕೆಟ್‌ನಲ್ಲಿ ವಾರ್ವಿಕ್‌ಷೈರ್ ಪರ ಆಡುವ ಮೂಲಕ ತಮ್ಮ ಪ್ರತಿಭೆಯನ್ನು ಮುಂದುವರಿಸಿದ್ದಾರೆ. ಯಾರ್ಕ್‌ಷೈರ್ ವಿರುದ್ಧದ ಮೊದಲ ಪಂದ್ಯದಲ್ಲಿ 3 ವಿಕೆಟ್ ಪಡೆದು ಯಶಸ್ಸು ಕಂಡಿದ್ದಾರೆ. ಈ ಯುವ ಸ್ಪಿನ್ನರ್ ಸದ್ಯ ಎರಡು ಕೌಂಟಿ ಪಂದ್ಯಗಳ ಒಪ್ಪಂದಕ್ಕೆ ಸಹಿ ಹಾಕಿದ್ದು, ಭವಿಷ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

ಪೃಥ್ವಿಶಂಕರ
|

Updated on: Jun 13, 2026 | 8:37 PM

Share
ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ್ದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ನಲ್ಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಇಂಗ್ಲಿಷ್ ಕೌಂಟಿ ಕ್ರಿಕೆಟ್ ಆಡುತ್ತಿರುವ ಸುತಾರ್, ವಾರ್ವಿಕ್‌ಷೈರ್ ತಂಡದ ಪರ 3 ವಿಕೆಟ್ ಪಡೆದು ಮಿಂಚಿದರು (PC-PTI).

1 / 5
ವಾಸ್ತವವಾಗಿ ಜೂನ್ 6 ರಂದು ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಪರ ಪಾದಾರ್ಪಣೆ ಮಾಡಿದ ಸುತಾರ್, ಈ ಪಂದ್ಯದಲ್ಲಿ ಏಳು ವಿಕೆಟ್‌ಗಳನ್ನು ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದರು. ಈ ಅದ್ಭುತ ಪ್ರದರ್ಶನದ ನಂತರ ಇಂಗ್ಲೆಂಡ್​ನಲ್ಲಿ ಕೌಂಟಿ ಕ್ರಿಕೆಟ್ ಆಡುವ ಅವಕಾಶವೂ ಸಿಕ್ಕಿತು. ಅದರಂತೆ ವಾರ್ವಿಕ್‌ಷೈರ್ ತಂಡದ ಪರ ಸುತಾರ್ ಎರಡು ಪಂದ್ಯಗಳನ್ನು ಆಡಲಿದ್ದಾರೆ (PC-PTI).

2 / 5
ಅದರಂತೆ ವಾರ್ವಿಕ್‌ಷೈರ್ ತಂಡದ ಪರ ಮೊದಲ ಪಂದ್ಯವನ್ನಾಡಿದ ಸುತಾರ್, ಯಾರ್ಕ್‌ಷೈರ್ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 21 ಓವರ್‌ಗಳನ್ನು ಬೌಲಿಂಗ್ ಮಾಡಿ 85 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಪಡೆದರು. ಸುತಾರ್ ಅವರ ಈ ಬೌಲಿಂಗ್‌ನಿಂದಾಗಿ, ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿ ಯಾರ್ಕ್‌ಷೈರ್ ತಂಡ 469 ರನ್‌ಗಳಿಗೆ ಆಲೌಟ್ ಆಯಿತು (PC-PTI).

3 / 5
ಪಂದ್ಯದ ಮೊದಲ ದಿನದಂದು ಯಾರ್ಕ್‌ಷೈರ್ ಬ್ಯಾಟ್ಸ್‌ಮನ್ ಸ್ಯಾಮ್ ವೈಟ್‌ಮನ್ ಅವರನ್ನು ಔಟ್ ಮಾಡುವ ಮೂಲಕ ಕೌಂಟಿ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ವಿಕೆಟ್ ಪಡೆದಿದ್ದ ಸುತಾರ್, ಮೊದಲ ದಿನದ ಆಟ ಮುಗಿಯುವ ಸ್ವಲ್ಪ ಮೊದಲು ಅಪಾಯಕಾರಿಯಾಗಿ ಕಾಣುತ್ತಿದ್ದ ಆರಂಭಿಕ ಬ್ಯಾಟ್ಸ್‌ಮನ್ ವಿಲಿಯಂ ಲಕ್ಸ್ಟನ್ ಅವರನ್ನು ಎಲ್ಬಿಡಬ್ಲ್ಯೂ ಮೂಲಕ ಔಟ್ ಮಾಡಿದ್ದರು (PC-PTI).

4 / 5
ನಂತರ, ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿಯೇ ಸುತಾರ್, ಜಾರ್ಜ್ ಹಿಲ್ ಅವರನ್ನು ಔಟ್ ಮಾಡಿದರು. ಮೇಲೆ ಹೇಳಿದಂತೆ ವಾರ್ವಿಕ್‌ಷೈರ್ ತಂಡ ಎರಡು ಕೌಂಟಿ ಚಾಂಪಿಯನ್‌ಶಿಪ್ ಪಂದ್ಯಗಳಿಗೆ ಮಾನವ್ ಸುತಾರ್ ಅವರೊಂದಿಗೆ ಅಲ್ಪಾವಧಿಯ ಒಪ್ಪಂದಕ್ಕೆ ಸಹಿ ಹಾಕಿದೆ. ಇದರರ್ಥ ಅವರು ಈ ಪಂದ್ಯದ ನಂತರ ಸೋಮರ್‌ಸೆಟ್ ವಿರುದ್ಧವೂ ಆಡಬಹುದು (PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ