AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಹಂಡ್ರೆಡ್ ಲೀಗ್​ನಲ್ಲೂ ಕಣಕ್ಕಿಳಿಯಲಿದೆ ‘ಸೂಪರ್ ಜೈಂಟ್ಸ್’​

The Hundred 2024: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್​ನಲ್ಲಿ 5 ಎಸೆತಗಳು ಇರಲಿವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಎಂಟ್ರಿ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 26, 2025 | 2:03 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ (The Hundred League) ಐಪಿಎಲ್​ನ ಮೂರು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದೆ. 

1 / 5
ಐಪಿಎಲ್​ನ ಮೂರು ಪ್ರಮುಖ ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ದಿ ಹಂಡ್ರೆಡ್ ಲೀಗ್​ ತಂಡಗಳ ಮಾಲೀಕತ್ವನ್ನು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಐಪಿಎಲ್​ ಫ್ರಾಂಚೈಸಿಗಳು ಹೊಸ ಹೆಜ್ಜೆಯನ್ನಿಟ್ಟಿದೆ.

2 / 5
ಅದರಂತೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಖರೀದಿಸಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡದ ಹೆಸರನ್ನು ಬದಲಿಸಲಾಗಿದೆ. ಅಲ್ಲದೆ ಇನ್ಮುಂದೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಹೆಸರಿನಲ್ಲಿ ಕಣಕ್ಕಿಳಿಯಲಿದೆ ಎಂದು ತಿಳಿಸಿದೆ. ಇದರೊಂದಿಗೆ ಸೂಪರ್ ಜೈಂಟ್ಸ್ ಹೆಸರಿನ ಮೂರು ತಂಡಗಳು ರೂಪುಗೊಂಡಂತಾಗಿದೆ. ಅಂದರೆ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್, ದಿ ಹಂಡ್ರೆಡ್ ಲೀಗ್​ನಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡಗಳು ಕಣಕ್ಕಿಳಿಯಲಿವೆ.

3 / 5
ಇನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ. ಅಲ್ಲದೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ಓವಲ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

4 / 5
ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಯಾರ್ಕ್‌ಷೈರ್ ಒಡೆತನದಲ್ಲಿದ್ದ ನಾರ್ದರ್ನ್ ಸೂಪರ್‌ಚಾರ್ಜರ್ಸ್‌ನ ಸಂಪೂರ್ಣ ಪಾಲನ್ನು ಸನ್​ ಗ್ರೂಪ್ ಖರೀದಿಸಿದ್ದು, ಹೀಗಾಗಿ ಮುಂಬರುವ ದಿ ಹಂಡ್ರೆಡ್ ಲೀಗ್​ನಲ್ಲಿ ನಾರ್ದರ್ನ್ ಸೂಪರ್‌ಚಾರ್ಜರ್ಸ್ ತಂಡವು ಸನ್​ರೈಸರ್ಸ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ