- Kannada News Photo gallery Cricket photos Manchester Originals to be renamed as Manchester Super Giants
ದಿ ಹಂಡ್ರೆಡ್ ಲೀಗ್ನಲ್ಲೂ ಕಣಕ್ಕಿಳಿಯಲಿದೆ ‘ಸೂಪರ್ ಜೈಂಟ್ಸ್’
The Hundred 2024: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು ಇರಲಿವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಎಂಟ್ರಿ ಕೊಟ್ಟಿದ್ದಾರೆ.
Updated on: Jul 26, 2025 | 2:03 PM

ಇಂಡಿಯನ್ ಪ್ರೀಮಿಯರ್ ಲೀಗ್ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ನಲ್ಲಿ (The Hundred League) ಐಪಿಎಲ್ನ ಮೂರು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದೆ.

ಐಪಿಎಲ್ನ ಮೂರು ಪ್ರಮುಖ ಫ್ರಾಂಚೈಸಿಗಳಾದ ಮುಂಬೈ ಇಂಡಿಯನ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ದಿ ಹಂಡ್ರೆಡ್ ಲೀಗ್ ತಂಡಗಳ ಮಾಲೀಕತ್ವನ್ನು ಪಡೆದುಕೊಂಡಿದೆ. ಈ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಲೀಗ್ನತ್ತ ಐಪಿಎಲ್ ಫ್ರಾಂಚೈಸಿಗಳು ಹೊಸ ಹೆಜ್ಜೆಯನ್ನಿಟ್ಟಿದೆ.

ಅದರಂತೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಖರೀದಿಸಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡದ ಹೆಸರನ್ನು ಬದಲಿಸಲಾಗಿದೆ. ಅಲ್ಲದೆ ಇನ್ಮುಂದೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಹೆಸರಿನಲ್ಲಿ ಕಣಕ್ಕಿಳಿಯಲಿದೆ ಎಂದು ತಿಳಿಸಿದೆ. ಇದರೊಂದಿಗೆ ಸೂಪರ್ ಜೈಂಟ್ಸ್ ಹೆಸರಿನ ಮೂರು ತಂಡಗಳು ರೂಪುಗೊಂಡಂತಾಗಿದೆ. ಅಂದರೆ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್, ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್, ದಿ ಹಂಡ್ರೆಡ್ ಲೀಗ್ನಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡಗಳು ಕಣಕ್ಕಿಳಿಯಲಿವೆ.

ಇನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ. ಅಲ್ಲದೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ಓವಲ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಹಾಗೆಯೇ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್ನಲ್ಲಿ ತಂಡವನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಯಾರ್ಕ್‌ಷೈರ್ ಒಡೆತನದಲ್ಲಿದ್ದ ನಾರ್ದರ್ನ್ ಸೂಪರ್‌ಚಾರ್ಜರ್ಸ್‌ನ ಸಂಪೂರ್ಣ ಪಾಲನ್ನು ಸನ್ ಗ್ರೂಪ್ ಖರೀದಿಸಿದ್ದು, ಹೀಗಾಗಿ ಮುಂಬರುವ ದಿ ಹಂಡ್ರೆಡ್ ಲೀಗ್ನಲ್ಲಿ ನಾರ್ದರ್ನ್ ಸೂಪರ್‌ಚಾರ್ಜರ್ಸ್ ತಂಡವು ಸನ್ರೈಸರ್ಸ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.
