Manu Bhaker: 128 ವರ್ಷಗಳ ಒಲಿಂಪಿಕ್ಸ್​ನಲ್ಲಿ ಹೊಸ ಇತಿಹಾಸ ಬರೆದ ಮನು ಭಾಕರ್

|

Updated on: Aug 03, 2024 | 2:47 PM

Manu Bhaker: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮನು ಭಾಕರ್ ಒಟ್ಟು ಮೂರು ಸ್ಪರ್ಧೆಗಳಲ್ಲಿ ಕಾಣಿಸಿಕೊಂಡಿದ್ದರು. ಈ ಮೂರು ಸ್ಪರ್ಧೆಗಳಲ್ಲೂ ಭಾರತೀಯ ಶೂಟರ್ ಫೈನಲ್​ ತಲುಪಿರುವುದು ವಿಶೇಷ. ಅಲ್ಲದೆ ಎರಡು ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಇನ್ನು 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕೂದಲೆಳೆಯ ಅಂತರದಲ್ಲಿ ಪದಕ ಕೈ ತಪ್ಪಿದೆ.

1 / 7
ಭಾರತದ ಶೂಟರ್ ಮನು ಭಾಕರ್ ಅವರ ಪ್ಯಾರಿಸ್ ಒಲಿಂಪಿಕ್ಸ್​ ಅಂತ್ಯವಾಗಿದೆ. ಒಟ್ಟು ಮೂರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಮನು ಎರಡು ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್​ನಲ್ಲಿ ಕಂಚಿನ ಪದಕಕ್ಕೆ ಕೊರೊಳೊಡ್ಡಿ ಮನು, ಆ ಬಳಿಕ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಫರ್ಧೆದಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಮತ್ತೊಂದು ಪದಕ ಗೆದ್ದುಕೊಂಡಿದ್ದರು.

2 / 7
ಇನ್ನು 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಹ್ಯಾಟ್ರಿಕ್ ಪದಕ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡರು. ಇದಾಗ್ಯೂ  ಒಂದೇ ಆವೃತ್ತಿಯ ಒಲಿಂಪಿಕ್ಸ್​ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಹಿಂದೆ ಭಾರತವನ್ನು ಪ್ರತಿನಿಧಿಸಿ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದಿದ್ದ ನಾರ್ಮನ್ ಪ್ರಿಚರ್ಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

3 / 7
1990 ರಲ್ಲಿ ನಡೆದ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ (ಬ್ರಿಟಿಷ್) ಅವರು 200 ಮೀಟರ್ ಹರ್ಡಲ್ಸ್ ಮತ್ತು 200 ಮೀಟರ್ ಓಟದಲ್ಲಿ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಈ ಮೂಲಕ ಸ್ವಾತಂತ್ರ ಪೂರ್ವದಲ್ಲಿ ಭಾರತದ ಪರ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದರು.

4 / 7
ಇದಾದ ಬಳಿಕ ಭಾರತದ ಯಾವುದೇ ಸ್ಪರ್ಧಿ ಒಲಿಂಪಿಕ್ಸ್​ ಆವೃತ್ತಿಯೊಂದರಲ್ಲಿ ಎರಡು ಪದಕಗಳನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಶೂಟಿಂಗ್​ನಲ್ಲಿ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಮನು ಭಾಕರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಸ್ವಾತಂತ್ರದ ಬಳಿಕ ಭಾರತದ ಪರ ಒಲಿಂಪಿಕ್ಸ್​ ಆವೃತ್ತಿಯಲ್ಲಿ ಅತೀ ಹೆಚ್ಚು ಪದಕ ಗೆದ್ದ ಹಿರಿಮೆಗೆ ಪಾತ್ರರಾಗಿದ್ದಾರೆ.

5 / 7
ಹಾಗೆಯೇ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ಪರ ಎರಡು ಪದಕಗಳನ್ನು ಸಾಧಕರ ಪಟ್ಟಿಗೂ ಮನು ಭಾಕರ್ ಹೆಸರು ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಈ ಸಾಧನೆ ಮಾಡಿದ್ದರು.

6 / 7
2008ರ ಬೀಜಿಂಗ್ ಒಲಿಂಪಿಕ್ಸ್​ನ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದ ಸುಶೀಲ್ ಕುಮಾರ್, 2012ರ ಲಂಡನ್ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದರು. ಇನ್ನು 2016ರ ರಿಯೋ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕಕ್ಕೆ ಕೊರೊಳೊಡ್ಡಿದ್ದ ಪಿವಿ ಸಿಂಧು, 2020ರ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು.

7 / 7
ಇದೀಗ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿಯೇ ಎರಡು ಮೆಡಲ್​ಗಳನ್ನು ಗೆಲ್ಲುವ ಮೂಲಕ ಮನು ಭಾಕರ್, 128 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

Published On - 2:22 pm, Sat, 3 August 24