4 ವರ್ಷಗಳ ನಂ.1 ಪಟ್ಟ ಕಳೆದುಕೊಂಡ ರವೀಂದ್ರ ಜಡೇಜಾ; ಅಗ್ರಸ್ಥಾನಕ್ಕೇರಿದ ಯಾನ್ಸನ್‌

Updated on: Oct 28, 2026 | 4:40 PM

ಮಾರ್ಕೊ ಯಾನ್ಸನ್ ICC ಟೆಸ್ಟ್ ಆಲ್‌ರೌಂಡರ್‌ಗಳ ವಿಶ್ವ ನಂ.1 ಸ್ಥಾನಕ್ಕೆ ಏರಿದ್ದಾರೆ, ರವೀಂದ್ರ ಜಡೇಜಾ ನಾಲ್ಕು ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಆಲ್‌ರೌಂಡ್ ಪ್ರದರ್ಶನ ನೀಡಿದ ಯಾನ್ಸನ್ (85 ರನ್, 5 ವಿಕೆಟ್) ಈ ಸಾಧನೆ ಮಾಡಿದ್ದಾರೆ. ಅವರು ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲೂ ನಂ.1 ಸ್ಥಾನ ಪಡೆದಿದ್ದಾರೆ. ಈ ದಕ್ಷಿಣ ಆಫ್ರಿಕಾದ ಆಟಗಾರನ ಉನ್ನತ ಪ್ರದರ್ಶನ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದೆ.

1 / 5
ಭಾರತದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ತಮ್ಮ ಬಳಿಯಲ್ಲಿದ್ದ ಐಸಿಸಿ ಟೆಸ್ಟ್ ಆಲ್‌ರೌಂಡರ್‌ಗಳ ವಿಶ್ವದ ನಂ.1 ಪಟ್ಟವನ್ನು ಕಳೆದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಯುವ ಆಲ್‌ರೌಂಡರ್ ಮಾರ್ಕೊ ಯಾನ್ಸನ್ ಇದೀಗ ಈ ಸ್ಥಾನವನ್ನು ಅಲಂಕರಿಸಿದ್ದಾರೆ(PC-PTI).

ಭಾರತದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ತಮ್ಮ ಬಳಿಯಲ್ಲಿದ್ದ ಐಸಿಸಿ ಟೆಸ್ಟ್ ಆಲ್‌ರೌಂಡರ್‌ಗಳ ವಿಶ್ವದ ನಂ.1 ಪಟ್ಟವನ್ನು ಕಳೆದುಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ಯುವ ಆಲ್‌ರೌಂಡರ್ ಮಾರ್ಕೊ ಯಾನ್ಸನ್ ಇದೀಗ ಈ ಸ್ಥಾನವನ್ನು ಅಲಂಕರಿಸಿದ್ದಾರೆ(PC-PTI).

2 / 5

ಆಸ್ಟ್ರೇಲಿಯಾ ವಿರುದ್ಧ ಗ್ಕೆಬರ್ಹಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಯಾನ್ಸನ್, ಐಸಿಸಿ ಬಿಡುಗಡೆ ಮಾಡಿದ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲಕ್ಕೇರಿ ಅಗ್ರಸ್ಥಾನಕ್ಕೇರಿದ್ದಾರೆ. ಇದೇ ಮೊದಲ ಬಾರಿಗೆ ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ನಂ.1 ಸ್ಥಾನ ಪಡೆದಿರುವ ಯಾನ್ಸನ್, 451 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ(PC-PTI).

3 / 5

ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅವರು ದಕ್ಷಿಣ ಆಫ್ರಿಕಾ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲಗೊಳಿಸಿತ್ತು. ಪಂದ್ಯದಲ್ಲಿ ಯಾನ್ಸನ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಿದ್ದರು. ಬ್ಯಾಟಿಂಗ್‌ನಲ್ಲಿ 85 ರನ್ ಗಳಿಸಿದ ಅವರು, ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿ ಎದುರಾಳಿ ತಂಡಕ್ಕೆ ದೊಡ್ಡ ಆಘಾತ ನೀಡಿದ್ದರು(PC-PTI).

4 / 5

ಈ ಅಮೋಘ ಪ್ರದರ್ಶನದ ಫಲವಾಗಿ ಯಾನ್ಸನ್ ಟೆಸ್ಟ್ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಮಾತ್ರವಲ್ಲದೆ, ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲೂ ನಂ.1 ಸ್ಥಾನಕ್ಕೇರಿದ್ದಾರೆ. ಮಾರ್ಕೊ ಯಾನ್ಸನ್ ಅವರ ಪ್ರಭಾವ ಆಲ್‌ರೌಂಡರ್‌ಗಳ ಶ್ರೇಯಾಂಕಕ್ಕೆ ಮಾತ್ರ ಸೀಮಿತವಾಗಿಲ್ಲ. ಎಡಗೈ ವೇಗದ ಬೌಲರ್, ಆಸ್ಟ್ರೇಲಿಯಾದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು ಹಿಂದಿಕ್ಕಿ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲೂ ಅಗ್ರಸ್ಥಾನ ಪಡೆದುಕೊಂಡಿದ್ದಾರೆ(PC-PTI).

5 / 5

ಬೌಲರ್‌ಗಳ ಶ್ರೇಯಾಂಕದಲ್ಲಿ ಯಾನ್ಸನ್ ಐದು ಸ್ಥಾನಗಳ ಏರಿಕೆ ಕಂಡಿದ್ದಾರೆ. ಇನ್ನು ಟೆಸ್ಟ್ ಬ್ಯಾಟರ್‌ಗಳ ಪಟ್ಟಿಯಲ್ಲಿ 13 ಸ್ಥಾನ ಮೇಲಕ್ಕೇರಿ 56ನೇ ಸ್ಥಾನಕ್ಕೆ ತಲುಪಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿರುವ ಯಾನ್ಸನ್, ದಕ್ಷಿಣ ಆಫ್ರಿಕಾ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

Published On - 4:35 pm, Wed, 28 October 26

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us