ಟೀಮ್ ಇಂಡಿಯಾ ಬೌಲರ್ಗಳ ಬೆಂಡೆತ್ತಿ ಭರ್ಜರಿ ದಾಖಲೆ ಬರೆದ ಯಾನ್ಸೆನ್
South Africa vs India: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 208 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.
1 / 6
ಸೆಂಚುರಿಯನ್ನಲ್ಲಿ ನಡೆದ ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ಆಟಗಾರ ಮಾರ್ಕೊ ಯಾನ್ಸೆನ್ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಸಹ ಟೀಮ್ ಇಂಡಿಯಾ ಬೌಲರ್ಗಳನ್ನು ಬೆಂಡೆತ್ತುವ ಮೂಲಕ ಎಂಬುದು ವಿಶೇಷ.
2 / 6
ಸೂಪರ್ ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್ ಸ್ಪೋಟಕ ಇನಿಂಗ್ಸ್ ಆಡಿದರು.
3 / 6
7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯಾನ್ಸೆನ್ ಟೀಮ್ ಇಂಡಿಯಾ ಬೌಲರ್ಗಳ ಬೆಂಡೆತ್ತಿದರು. ಅಲ್ಲದೆ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಭಾರತದ ವಿರುದ್ಧ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡರು.
4 / 6
ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಕ್ಯಾಮರೋನ್ ಗ್ರೀನ್ ಹೆಸರಿನಲ್ಲಿತ್ತು. 2022 ರಲ್ಲಿ ಟೀಮ್ ಇಂಡಿಯಾ ವಿರುದ್ಧ ಗ್ರೀನ್ ಕೇವಲ 19 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಈ ದಾಖಲೆ ಬರೆದಿದ್ದರು.
5 / 6
ಇದೀಗ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಾರ್ಕೊ ಯಾನ್ಸೆನ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸೌತ್ ಆಫ್ರಿಕಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಕ್ವಿಂಟನ್ ಡಿಕಾಕ್ (15 ಎಸೆತಗಳು) ಅಗ್ರಸ್ಥಾನದಲ್ಲಿದ್ದು, ಇದೀಗ ಯಾನ್ಸೆನ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
6 / 6
ಇನ್ನು ಈ ಪಂದ್ಯದಲ್ಲಿ 17 ಎಸೆತಗಳನ್ನು ಎದುರಿಸಿದ ಮಾರ್ಕೊ ಯಾನ್ಸೆನ್ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 54 ರನ್ ಸಿಡಿಸಿದರು. ಈ ಸ್ಪೋಟಕ ಅರ್ಧಶತಕದ ಹೊರತಾಗಿಯೂ ಸೌತ್ ಆಫ್ರಿಕಾ ತಂಡ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಟೀಮ್ ಇಂಡಿಯಾ 11 ರನ್ಗಳ ರೋಚಕ ಜಯ ಸಾಧಿಸಿದೆ.