ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಆಲ್ರೌಂಡರ್ ಮಾರ್ಕಸ್ ಸ್ಟೊಯಿನಿಸ್.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆರೋನ್ ಫಿಂಚ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿತು.
158 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ಆಸ್ಟ್ರೇಲಿಯಾ ತಂಡವು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿತು. ಪರಿಣಾಮ 9ನೇ ಓವರ್ನಲ್ಲಿ ಆಸ್ಟ್ರೇಲಿಯಾ ತಂಡದ ಮೊತ್ತ 2 ವಿಕೆಟ್ ನಷ್ಟಕ್ಕೆ ಬಂದು ನಿಂತಿತು.
ಇತ್ತ 13ನೇ ಓವರ್ ವೇಳೆ ಮ್ಯಾಕ್ಸ್ವೆಲ್ (23) ವಿಕೆಟ್ ಪಡೆಯುವ ಮೂಲಕ ಸಂಪೂರ್ಣ ಹಿಡಿತ ಸಾಧಿಸಿದ್ದ ಶ್ರೀಲಂಕಾ ಪಾಲಿಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದು ಮಾರ್ಕಸ್ ಸ್ಟೊಯಿನಿಸ್.
ಕ್ರೀಸ್ಗೆ ಬರುತ್ತಿದ್ದಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸ್ಟೊಯಿನಿಸ್ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಪರಿಣಾಮ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ ಪರ ಟಿ20ಯಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ಸ್ಟೊಯಿನಿಸ್ ಪಾಲಾಯಿತು.
ಅಷ್ಟೇ ಅಲ್ಲದೆ ಟಿ20 ವಿಶ್ವಕಪ್ನಲ್ಲಿ ಯುವರಾಜ್ ಸಿಂಗ್ (12 ಎಸೆತ) ಬಳಿಕ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ವಿಶ್ವ ದಾಖಲೆಯನ್ನೂ ಕೂಡ ಮಾರ್ಕಸ್ ಸ್ಟೊಯಿನಿಸ್ ಬರೆದರು.
ಇನ್ನು 18 ಎಸೆತಗಳಲ್ಲಿ 4 ಫೋರ್ ಹಾಗೂ 6 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಸ್ಟೊಯಿನಿಸ್ 59 ರನ್ ಚಚ್ಚಿದರು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 16.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿತು.
Published On - 9:04 pm, Tue, 25 October 22