AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚ್ಚರಿಯ ನಿರ್ಧಾರ… ದಿಢೀರ್ ನಿವೃತ್ತಿ ಘೋಷಿಸಿದ ಮಾರ್ಕಸ್ ಸ್ಟೊಯಿನಿಸ್

Marcus Stoinis retirement: ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ನನ್ನ ಈ ನಿರ್ಧಾರ, ಸುಲಭವಾಗಿಲ್ಲ. ಆದರೆ ಏಕದಿನ ಕ್ರಿಕೆಟ್​ನಿಂದ ಹೊರಗುಳಿದು ನನ್ನ ವೃತ್ತಿಜೀವನದ ಮುಂದಿನ ಅಧ್ಯಾಯದತ್ತ ಸಂಪೂರ್ಣವಾಗಿ ಗಮನಹರಿಸಲು ಇದು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ ಎಂದು ಮಾರ್ಕಸ್ ಸ್ಟೊಯಿನಿಸ್ ತಿಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 06, 2025 | 12:15 PM

Share
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಸ್ಟೊಯಿನಿಸ್ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ. ಹೀಗಾಗಿ ಮುಂಬರುವ ಟೂರ್ನಿಗೆ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಬದಲಿ ಆಲ್​ರೌಂಡರ್​ನನ್ನು ಆಯ್ಕೆ ಮಾಡಬೇಕಾಗುತ್ತದೆ.

1 / 5
ಇದಕ್ಕೂ ಮುನ್ನ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾದ 15 ಸದಸ್ಯರ ಆಸ್ಟ್ರೇಲಿಯಾ ತಂಡದಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಂಡಿದ್ದರು. ಆದರೀಗ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೆರಿಯರ್ ಅಂತ್ಯಗೊಳಿಸುತ್ತಿರುವುದಾಗಿ ಸ್ಟೊಯಿನಿಸ್ ತಿಳಿಸಿದ್ದಾರೆ.

2 / 5
35 ವರ್ಷದ ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದು, ಇದಾಗ್ಯೂ ಅವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಫ್ರಾಂಚೈಸಿ ಲೀಗ್​ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲು ನಿರ್ಧರಿಸಿದ್ದಾರೆ.

3 / 5
ಮಾರ್ಕಸ್ ಸ್ಟೊಯಿನಿಸ್ ಆಸ್ಟ್ರೇಲಿಯಾ ಪರ 71 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 64 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 1 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1495 ರನ್ ಕಲೆಹಾಕಿದ್ದಾರೆ. ಹಾಗೆಯೇ 64 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿ 48 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

4 / 5
2015 ರಿಂದ ಶುರುವಾದ ಏಕದಿನ ಕ್ರಿಕೆಟ್​ ಬದುಕಿಗೆ 10 ವರ್ಷಗಳ ಬಳಿಕ ಮಾರ್ಕಸ್ ಸ್ಟೊಯಿನಿಸ್ ಅಂತ್ಯವಾಡಿದ್ದು, ಹೀಗಾಗಿ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಟೊಯಿನಿಸ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಟಿ20 ತಂಡದಲ್ಲಿ ಮುಂದುವರೆಯುವ ವಿಶ್ವಾಸದಲ್ಲಿದ್ದಾರೆ.

5 / 5

Published On - 12:08 pm, Thu, 6 February 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!