AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

Marnus Labuschagne: ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಇದು ಅವರಿಗೆ ಮೊದಲ PSL ಸೀಸನ್. T20 ಕ್ರಿಕೆಟ್‌ನಲ್ಲಿ ಕಡಿಮೆ ಅನುಭವ ಹೊಂದಿದ್ದರೂ, ಮ್ಯಾಕ್ಸ್‌ವೆಲ್ ಲಭ್ಯವಿಲ್ಲದ ಕಾರಣ ಲಬುಶೇನ್‌ಗೆ ನಾಯಕತ್ವದ ಜವಾಬ್ದಾರಿ ದೊರಕಿದೆ. ಅವರ T20 ಅಂಕಿಅಂಶಗಳು ಸಾಧಾರಣವಾಗಿದ್ದು, ಈ ನಾಯಕತ್ವವು ಅನಿರೀಕ್ಷಿತವಾಗಿದೆ.

ಪೃಥ್ವಿಶಂಕರ
|

Updated on: Mar 17, 2026 | 5:57 PM

Share
 ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೇನ್ ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದು, ಬಯಸದೆ ಬಂದ ಭಾಗ್ಯವೆಂಬಂತೆ ತಮ್ಮ ಮೊದಲ ಸೀಸನ್‌ನಲ್ಲಿಯೇ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಲಬುಶೇನ್ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ.

1 / 5
ಪಾಕಿಸ್ತಾನ ಸೂಪರ್ ಲೀಗ್‌ನ ಈ ಹೊಸ ತಂಡದ ಜವಾಬ್ದಾರಿಯನ್ನು ಮಾರ್ನಸ್ ಲಬುಶೇನ್ ವಹಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಘೋಷಿಸಿದೆ. ವಾಸ್ತವವಾಗಿ ಮಾರ್ನಸ್ ಲಬುಶೇನ್ ಅವರಿಗೆ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚಿನ ಅನುಭವವಿಲ್ಲ. ಅದರಲ್ಲೂ ಫ್ರಾಂಚೈಸ್ ಕ್ರಿಕೆಟ್​ನಲ್ಲಿ ಲಬುಶೇನ್ ಕೇವಲ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡಿದ್ದು, ಇದಲ್ಲದೆ, ಅವರು ಇಂಗ್ಲೆಂಡ್‌ನ ಟಿ20 ಬ್ಲಾಸ್ಟ್ ಸ್ಪರ್ಧೆಯಲ್ಲಿಯೂ ಭಾಗವಹಿಸಿದ್ದಾರೆ.

2 / 5
ಲಬುಶೇನ್ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಉತ್ತಮ ಆಟಗಾರ, ಆದರೆ ಟಿ20 ಕ್ರಿಕೆಟ್‌ನಲ್ಲಿ ಅವರದ್ದು ದೊಡ್ಡ ಹೆಸರಲ್ಲ. ತಮ್ಮ ವೃತ್ತಿಜೀವನದಲ್ಲಿ ಕೇವಲ 55 ಟಿ20 ಪಂದ್ಯಗಳನ್ನು ಆಡಿರುವ ಲಬುಶೇನ್ 26.5 ಸರಾಸರಿಯಲ್ಲಿ 1381 ರನ್ ಗಳಿಸಿದ್ದಾರೆ. ಇದರಲ್ಲಿ ಕೇವಲ 8 ಅರ್ಧಶತಕಗಳು ಸೇರಿವೆ.

3 / 5
ಅಚ್ಚರಿಯ ಸಂಗತಿಯೆಂದರೆ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದಲ್ಲಿ ಟಿ20 ಕ್ರಿಕೆಟ್‌ನ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಇದ್ದಾರಾದರೂ ಅವರಿಗೆ ನಾಯಕತ್ವವನ್ನು ನೀಡಲಾಗಿಲ್ಲ. ಮ್ಯಾಕ್ಸ್‌ವೆಲ್ ಇಡೀ ಸೀಸನ್​ಗೆ ಲಭ್ಯವಿಲ್ಲದಿರುವ ಸಾಧ್ಯತೆಯಿದೆ, ಅದಕ್ಕಾಗಿಯೇ ಲಬುಶೇನ್ ಅವರಿಗೆ ನಾಯಕತ್ವವನ್ನು ನೀಡಲಾಗಿದೆ.

4 / 5
ಹೈದರಾಬಾದ್ ಕಿಂಗ್ಸ್‌ಮೆನ್ ಸ್ಕ್ವಾಡ್: ಮಾರ್ನಸ್ ಲಬುಶೇನ್ (ನಾಯಕ), ಸ್ಯಾಮ್ ಅಯೂಬ್, ಅಕಿಫ್ ಜಾವೇದ್, ಮಜ್ ಸದಾಕತ್, ಗ್ಲೆನ್ ಮ್ಯಾಕ್ಸ್‌ವೆಲ್, ಉಸ್ಮಾನ್ ಖಾನ್, ಮೊಹಮ್ಮದ್ ಅಲಿ, ಕುಸಾಲ್ ಪೆರೆರಾ, ಮೊಹಮ್ಮದ್ ಇರ್ಫಾನ್ ಖಾನ್, ಹಸನ್ ಖಾನ್, ಶಯಾನ್ ಜಹಾಂಗೀರ್, ಒಟ್ನಿಯೆಲ್ ಬಾರ್ಟ್‌ಮನ್, ಹಮ್ಮದ್ ಅಜಮ್, ರಿಲೆ ಮೆರೆಡಿತ್, ಶಾರ್ಜೀಲ್ ಖಾನ್, ಆಸಿಫ್ ಮೆಹಮೂದ್, ಹುನೈನ್ ಶಾ, ರಿಜ್ವಾನ್ ಮೆಹಮೂದ್, ಸಾದ್ ಅಲಿ, ತಯ್ಯಬ್ ಆರಿಫ್.

5 / 5
Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು

ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ

ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ

ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?